ಮಂಡ್ಯ || HDK ಅರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಅರೋಗ್ಯವಾಗಿದ್ದರೆ – Nikhil Kumaraswamy

ಮಂಡ್ಯ || HDK ಅರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ, ಅರೋಗ್ಯವಾಗಿದ್ದರೆ - Nikhil Kumaraswamy

ಮಂಡ್ಯ: ಸನ್ಮಾನ್ಯ ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ, ಆರೋಗ್ಯದಲ್ಲಿ ಯಾವುದೇ ಸಮಸ್ಯೆ ಇಲ್ಲ.ಯಾರು ಕೂಡ ಆತಂಕ ಪಡಬೇಕಾಗಿಲ್ಲ, ಆದರೆ ಎರಡು ವಾರಗಳ ಕಾಲ ವೈದ್ಯರು ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಆ ಹಿನ್ನೆಲೆಯಲ್ಲಿ ಅವರ ಪರವಾಗಿ ನಾನು ಈ ಕಾರ್ಯಕ್ರಮಕ್ಕೆ ಬಂದಿದ್ದೇನೆ ಯಾರು ಕೂಡ ಆತಂಕ ಪಡುವ ಅಗತ್ಯ ಇಲ್ಲ ಎಂದು ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದರು.

ಜಿಲ್ಲೆಯ ಬೆಟ್ಟಹಳ್ಳಿ ಗ್ರಾಮದಲ್ಲಿ ಸೋಮೇಶ್ವರಸ್ವಾಮಿ ದೇವಸ್ಥಾನದ ಪುನರ್ ಪ್ರತಿಷ್ಠಾಪನೆ ಮತ್ತು ಶಿಖರ ಕಳಸ ಪ್ರತಿಷ್ಠಾಪನಾ ಸಮಾರಂಭ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕುಮಾರಣ್ಣ ಅರೋಗ್ಯ ಸರಿ ಇಲ್ಲ ಅಂತ ರಾಜ್ಯದಲ್ಲೆಡೆ ಚರ್ಚೆಗಳು ಶುರುವಾಗಿದೆ, ಸೋಮೇಶ್ವರ ಸ್ವಾಮಿಯ ಸನ್ನಿಧಿಯಲ್ಲಿ ನಿಂತು ಒಂದು ಮಾತನ್ನು ತಿಳಿಸುತ್ತೇನೆ. ಅವರ ತಂದೆ ತಾಯಿ ಆಶೀರ್ವಾದ, ಭಗವಂತನ ಕೃಪೆ, ಜೊತೆಯಲ್ಲಿ ನಿಮ್ಮೆಲ್ಲರ ಪ್ರೀತಿಯ ಹಾರೈಕೆಯಿಂದ ಸನ್ಮಾನ್ಯ ಕುಮಾರಣ್ಣ ಅವರು ಆರೋಗ್ಯವಾಗಿದ್ದಾರೆ. ಯಾವುದೇ ಆರೋಗ್ಯದ ಸಮಸ್ಯೆ ಇಲ್ಲ, ಯಾರು ಕೂಡ ಆತಂಕ ಪಡುವ ಅಗತ್ಯವಿಲ್ಲ ಎಂದು ತಿಳಿಸಿದರು.

ಕುಮಾರಣ್ಣ ಅವರು 2ನೇ ಬಾರಿ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಮೂರು ವಿದ್ಯುತ್ ಉತ್ಪಾದಕ ಘಟಕಗಳನ್ನು ಮತ್ತು ನೀರಾವರಿಗೆ 200 ಕೋಟಿಗೂ ಹೆಚ್ಚು ಅನುದಾನವನ್ನು ನೀಡಿ ತಾಲೂಕಿನ ಸರ್ವತೋಮುಖ ಅಭಿವೃದ್ಧಿಗೆ ಕುಮಾರಣ್ಣ ಅವರು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ಎಂದು ಅವರು ತಿಳಿಸಿದರು.

BOX

ನಂತರ ಇತ್ತೀಚೆಗೆ ಮಂಡ್ಯ ಜಿಲ್ಲೆಯ ಮಲ್ಲನಾಯಕನ ಕಟ್ಟೆ ಗ್ರಾಮದಲ್ಲಿ ಕಬಡ್ಡಿ ಪಂದ್ಯದ ವೇಳೆ ವೀಕ್ಷಕರ ಗ್ಯಾಲರಿ ಕುಸಿದು ಬಿದ್ದು ಸಾವನ್ನಪ್ಪಿದ ಪಾಪಣ್ಣಚಾರಿ ಅವರ ಮನೆಗೆ ಭೇಟಿ ನೀಡಿ ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿ ಧೈರ್ಯ ತುಂಬಿದರು.

ಇದೇ ವೇಳೆ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನದ ಪರಮಪೂಜ್ಯ ಜಗದ್ಗುರುಗಳಾದ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದ ನಾಥ ಮಹಾಸ್ವಾಮೀಜಿ ಅವರು ದಿವ್ಯಸಾನ್ನಿಧ್ಯದಲ್ಲಿ ಮಾಜಿ ಸಚಿವರಾದ ಸಿ. ಎಸ್ ಪುಟ್ಟರಾಜು ಅವರು, ಮನ್ಮುಲ್ ಮಾಜಿ ಅಧ್ಯಕ್ಷರಾದ  ರಾಮಚಂದ್ರು ಅವರು ಮುಖಂಡರಾದ ಶಂಕರೇಗೌಡ ಅವರು ಸೇರಿದಂತೆ ಅನೇಕ ಪ್ರಮುಖರು, ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *