ಮಂಡ್ಯ : KRS ನಿರ್ಮಾಣವಾದ 92 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಸತತ 156 ದಿನಗಳು 124.48 ಅಡಿ ನೀರಿನ ಲಭ್ಯತೆ ಹೊಂದಿದೆ ಎಂದು ಕೃಷಿ ಹಾಗೂ ನೀರಾವರಿ ಸಚಿವ ಎನ್ ಚಲುವರಾಯಸ್ವಾಮಿ ಸಂತಸವನ್ನ ವ್ಯಕ್ತಪಡಿಸಿದ್ದಾರೆ.
ಶ್ರೀರಂಗಪಟ್ಟಣ ತಾಲ್ಲೂಕಿನ ಕೆ ಆರ್ ಎಸ್ ನಲ್ಲಿ ನಡೆದ ಐಸಿಸಿ ಸಭೆ ನಂತರ ಸಚಿವ ಚಲುವರಾಯಸ್ವಾಮಿ ಅವರು ಮಧ್ಯಮಗಳ ಜೊತೆ ಮಾತನಾಡಿ, ಕಾಂಗ್ರೆಸ್ ಸರ್ಕಾರದ ಕಾಲ್ಗುಣ ಸರಿಯಿಲ್ಲ ಎಂದು ಟೀಕೆ ಮಾಡುತ್ತಿದ್ದರು. ನಮ್ಮದೇ ಸರ್ಕಾರದಲ್ಲಿ ಕೆಆರ್ ಎಸ್ ತನ್ನ ಭಾಗ್ಯ ತೋರಿದೆ. ಕಳೆದ ಆರು ತಿಂಗಳು ನಾಲೆಗಳಿಗೆ ನೀರು ಹರಿಸಲಾಗಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶಕ್ಕಿಂತ ಹೆಚ್ಚುವರಿ ನೀರನ್ನು ತಮಿಳುನಾಡಿಗೆ ಹರಿಸಲಾಗಿದೆ. ಇದಾಗಿಯೂ ಜಲಾಶಯ ಸಂಪೂರ್ಣ ಭರ್ತಿ ಇದ್ದು 124.30 ಅಡಿ ಪ್ರಸ್ತುತ ನೀರಿನ ಮಟ್ಟ ಇದೆ ಎಂದು ಹೇಳಿದರು.