ಮಂಗಳೂರು || ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ – ಪುತ್ತೂರಿಗೆ NDRF ತಂಡ ಆಗಮನ

ಮಂಗಳೂರು || ಕುಕ್ಕೆ ಸುಬ್ರಹ್ಮಣ್ಯ ಸ್ನಾನಘಟ್ಟ ಮುಳುಗಡೆ – ಪುತ್ತೂರಿಗೆ NDRF ತಂಡ ಆಗಮನ

ಮಂಗಳೂರು: ಕರಾವಳಿ ಮತ್ತು ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ ಪ್ರಸಿದ್ಧ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ (Kukke Subramanaya) ಕುಮಾರಧಾರಾ ಸ್ನಾನ ಘಟ್ಟ ಮುಳುಗಡೆಯಾಗಿದೆ.

ಕುಮಾರಧಾರಾ ನದಿ ತುಂಬಿ ಹರಿಯುತ್ತಿದ್ದು ಭಕ್ತಾಧಿಗಳಿಗೆ ಸ್ನಾನಘಟ್ಟದ ಬಳಿ ಇಳಿಯದಂತೆ ಸೂಚಿಸಲಾಗಿದ್ದು, ಭಕ್ತಾಧಿಗಳು ಕೇವಲ ನದಿ ನೀರನ್ನು ತಲೆಗೆ ಚಿಮುಕಿಸಲು ಮಾತ್ರ ಅನುಮತಿ ನೀಡಲಾಗಿದೆ

ದೇವಸ್ಥಾನದ ಆಡಳಿತ ಸ್ನಾನಘಟ್ಟದ ಸುತ್ತ ಹಗ್ಗವನ್ನು ಕಟ್ಟಿ ಹೆಚ್ಚುವರಿ ಸಿಬ್ಬಂದಿ ನೇಮಕ ಮಾಡಿದೆ. ಪ್ರಕೃತಿ ವಿಕೋಪ ತಡೆ ಸಿಬ್ಬಂದಿ ನೇಮಕ ಮಾಡುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ

ಇಂದು ರೆಡ್ ಅಲರ್ಟ್:

ದಕ್ಷಿಣ ಕನ್ನಡ ಜಿಲ್ಲಾದ್ಯಂತ ಭಾರೀ ಗಾಳಿ ಮಳೆಯಾಗುತ್ತಿದ್ದು ಇಂದೂ ಕೂಡಾ ರೆಡ್ ಅಲರ್ಟ್ ಜಾರಿಯಾಗಿದೆ. ಬಿಟ್ಟು ಬಿಡದೇ ನಿರಂತರವಾಗಿ ಗುಡುಗು ಸಿಡಿಲು ಸಹಿತ ಭಾರೀ ಗಾಳಿ ಮಳೆ ಸುರಿಯುತ್ತಿದೆ

ಮಳೆ ಅಬ್ಬರದ ಹಿನ್ನೆಲೆಯಲ್ಲಿ ಪುತ್ತೂರಿಗೆ 25 ಸಿಬ್ಬಂದಿಯ ಎನ್ಡಿಆರ್ಎಫ್ (NDRF) ಸಿಬ್ಬಂದಿ ಆಗಮಿಸಿದ್ದಾರೆ. ಭಾರೀ ಗಾಳಿ ಮಳೆ ಹಿನ್ನಲೆ ಅಧಿಕಾರಿಗಳಿಗೆ ಸರ್ವ ಸನ್ನದ್ಧ ಆಗಿರಲು ಸೂಚನೆ ನೀಡಲಾಗಿದೆ.

Leave a Reply

Your email address will not be published. Required fields are marked *