ಮಂಗಳೂರು: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಕಲಿ ತೆರಿಗೆ ನೋಂದಣಿ ಜಾಲವೊಂದು ಪತ್ತೆ ಆಗಿದ್ದು, ನಕಲಿ ಪ್ರಮಾಣಪತ್ರಗಳನ್ನು ಸೃಷ್ಟಿಸಿ ಲಕ್ಷಾಂತರ ರೂ ವಂಚನೆ ಮಾಡಿರುವಂತಹ ಘಟನೆ ಬೆಳಕಿಗೆ ಬಂದಿದೆ. ಮಹಾನಗರ ಪಾಲಿಕೆಯಿಂದ ನೀಡುವ ಸರ್ಟಿಫಿಕೇಟ್ನ್ನೇ ವಂಚಕರು ಕಂಪ್ಯೂಟರ್ ತಂತ್ರಜ್ಞಾನ ಬಳಸಿ ನಕಲಿ ಮಾಡಿ ವಂಚಿಸಿದ್ದಾರೆ. ಅಷ್ಟೇ ಅಲ್ಲದೆ ಉದ್ದಿಮೆದಾರರಿಂದ ಹಣ ಸಂಗ್ರಹಿಸಿ ಪಾಲಿಕೆಗೆ ಕಟ್ಟದೆ ಕೆಲ ಏಜೆಂಟರು ದೋಖಾ ಮಾಡಿದ್ದಾರೆ. ಸದ್ಯ ಪಾಲಿಕೆಯಿಂದ ಕಂಕನಾಡಿ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.

ಈ ನಕಲಿ ಸರ್ಟಿಫಿಕೇಟ್ ಮೇಲ್ನೋಟಕ್ಕೆ ನೋಡಿದರೆ ಯಾವುದೇ ವ್ಯತ್ಯಾಸ ಕಂಡುಬರುತ್ತಿಲ್ಲ. ಆದರೆ ಕೆಲ ಸರ್ಟಿಫಿಕೇಟ್ನಲ್ಲಿ ಯಾರದ್ದೋ ಕ್ಯೂ ಆರ್ ಕೋಡ್ ಬಳಕೆ ಮಾಡಲಾಗಿದ್ದು, ಸ್ಕ್ಯಾನ್ ಮಾಡಿದಾಗ ಬೇರೆ ಉದ್ದಿಮೆದಾರರ ಪರವಾನಗಿ ಪತ್ರ ಲಭ್ಯವಾಗುತ್ತಿದೆ. ಅತ್ತ ಉದ್ದಿಮೆದಾರರು ಇದೇ ಮೂಲ ಪ್ರತಿ ಎಂದು ನಂಬಿದ್ದಾರೆ.