ನಟ ಮನೋರಂಜನ್ ರವಿಚಂದ್ರನ್ ಅವರು ಹೊಸ ಸಿನಿಮಾ ಒಪ್ಪಿಕೊಂಡಿದ್ದಾರೆ. ಇದು ಅವರ 5ನೇ ಸಿನಿಮಾ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಲಕ್ಷ್ಮಿ ನರಸಿಂಹಸ್ವಾಮಿ ದೇವಸ್ಥಾನದಲ್ಲಿ ಈ ಸಿನಿಮಾಗೆ ಮುಹೂರ್ತ ಮಾಡಲಾಗಿದೆ.
ಮನು ಸಹೋದರ ವಿಕ್ರಮ್ ರವಿಚಂದ್ರನ್ ಅವರು ಮೊದಲ ದೃಶ್ಯಕ್ಕೆ ಕ್ಲ್ಯಾಪ್ ಮಾಡಿ ಶುಭಾಶಯ ತಿಳಿಸಿದರು. ಹೊಸ ನಿರ್ದೇಶಕ ರುದ್ರೇಶ್ ಅವರು ಈ ಸಿನಿಮಾಗೆ ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಮನೋರಂಜನ್ ಜೊತೆ ಬೃಂದಾ ಆಚಾರ್ಯ ನಾಯಕಿಯಾಗಿ ನಟಿಸುತ್ತಿದ್ದಾರೆ. ಅನುಷಾ ರೈ ಅವರಿಗೆ ಒಂದು ವಿಶೇಷ ಪಾತ್ರವಿದೆ. ‘ವೈಎಸ್ ಪ್ರೊಡಕ್ಷನ್’ ಮೂಲಕ ಶ್ರೀನಿವಾಸ್ ಅವರು ಈ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ.
For More Updates Join our WhatsApp Group :




