ತಲೆಬುರುಡೆ ತಂದ ಕೇಸ್​ನಲ್ಲಿ ಮಾಸ್ಕ್​ಮ್ಯಾನ್ ಸಿ.ಎನ್.ಚಿನ್ನಯ್ಯ ಅಲಿಯಾಸ್ ಚೆನ್ನ ಅರೆಸ್ಟ್ .| Dharmasthala case

ತಲೆಬುರುಡೆ ತಂದ ಕೇಸ್ನಲ್ಲಿ ಮಾಸ್ಕ್ಮ್ಯಾನ್ ಸಿ.ಎನ್.ಚಿನ್ನಯ್ಯ ಅಲಿಯಾಸ್ ಚೆನ್ನ ಅರೆಸ್ಟ್ .| Dharmasthala case

ಮಂಗಳೂರು: ಧರ್ಮಸ್ಥಳದಲ್ಲಿ  ಶವ ಹೂತಿದ್ದಾಗಿ ದೂರು ವಿಚಾರವಾಗಿ ಇದೀಗ ಎಸ್​ಐಟಿ ಅಧಿಕಾರಿಗಳು ಮಾಸ್ಕ್​ಮ್ಯಾನ್​ ಸಿಎನ್​ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು ಬಂಧಿಸಿದ್ದಾರೆ ತಲೆಬುರುಡೆ ತಂದ ಕೇಸ್​ನಲ್ಲಿ ಎಸ್​ಐಟಿ ಅಧಿಕಾರಿಗಳು ಚಿನ್ನಯ್ಯನನ್ನು ಬಂಧಿಸಿದ್ದು, ಆ ಮೂಲಕ ಸಾಕ್ಷಿ ಸಂರಕ್ಷಣಾ ಕಾಯ್ದೆಯಿಂದ ವಿಮುಖಗೊಳಿಸಲಾಗಿದೆ. ಇಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಕೋರ್ಟ್​ಗೆ ಮಾಸ್ಕ್​ಮ್ಯಾನ್​ ನನ್ನ ಎಸ್​ಐಟಿ ಅಧಿಕಾರಿಗಳು ಹಾಜರುಪಡಿಸಲಿದ್ದಾರೆ.

ಇನ್ನು ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ಮಾಸ್ಕ್​ಮ್ಯಾನ್‌ಗೆ ಎಸ್‌ಐಟಿ ಅಧಿಕಾರಿಗಳು ವೈದ್ಯಕೀಯ ತಪಾಸಣೆ ಮಾಡಿಸಲಿದ್ದಾರೆ. ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್ ನಡೆಯಲಿದೆ. ಬಳಿಕ ಬೆಳ್ತಂಗಡಿ ಕೋರ್ಟ್ ಮುಂದೆ ಹಾಜರು ಪಡಿಸಲಾಗುವುದು. ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ನೀಡುವಂತೆ SIT ಮನವಿ ಮಾಡಲಿದ್ದು, ಆ ಮೂಲಕ ಮತ್ತಷ್ಟು ವಿಚಾರಣೆ ನಡೆಸುವ ಸಾಧ್ಯತೆ ಇದೆ.

ಮಾಸ್ಕ್​ಮ್ಯಾನ್​ ಆರೋಪದ ಬಗ್ಗೆ ಎಸ್​​ಐಟಿ ಅಧಿಕಾರಿಗಳು ಮಾಸ್ಕ್​ಮ್ಯಾನ್​ ಸಿಎನ್​ ಚಿನ್ನಯ್ಯನನ್ನು ತನಿಖೆ ಮಾಡಿದ್ದರು. ಐಪಿಎಸ್‌ ಅಧಿಕಾರಿ ಪ್ರಣವ್ ಮೊಹಂತಿ ಕೂಡ ನಿನ್ನೆ ಮಧ್ಯಾಹ್ನ 2 ಗಂಟೆಯಿಂದ ಮಾಸ್ಕ್​ಮ್ಯಾನ್​ ವಿಚಾರಣೆ ಮಾಡಿದ್ದರು. ಸುದೀರ್ಘ ವಿಚಾರಣೆ ಬಳಿಕ ಇದೀಗ ಬಂಧಿಸಲಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *