ರೈಲ್ವೆ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಬೆಂಕಿ.
ತ್ರಿಶೂರ್: ತ್ರಿಶೂರ್ ರೈಲ್ವೆ ನಿಲ್ದಾಣದ ಪಾರ್ಕಿಂಗ್‌ನಲ್ಲಿ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, 200ಕ್ಕೂ ಅಧಿಕ ವಾಹನಗಳು ಸುಟ್ಟು ಭಸ್ಮವಾಗಿವೆ. ಪ್ಲಾಟ್‌ಫಾರ್ಮ್ ಸಂಖ್ಯೆ 2 ರ ಬಳಿ ಇರುವ ದ್ವಿಚಕ್ರ ವಾಹನಗಳ ಪಾರ್ಕಿಂಗ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಪ್ರಯಾಣಿಕರು ಮತ್ತು ಹತ್ತಿರದ ನಿವಾಸಿಗಳಲ್ಲಿ ಭಯಭೀತರಾಗಿದ್ದಾರೆ. ವರದಿಗಳ ಪ್ರಕಾರ, 6.45ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಜ್ವಾಲೆ ವೇಗವಾಗಿ ಪಾರ್ಕಿಂಗ್ ಪ್ರದೇಶವನ್ನು ಆವರಿಸಿಕೊಂಡಿತ್ತು. ಪ್ರತಿನಿತ್ಯ ಸುಮಾರು 500ಕ್ಕೂ ಹೆಚ್ಚು ಬೈಕ್ಗಳನ್ನು ಅಲ್ಲಿ ನಿಲುಗಡೆ ಮಾಡಲಾಗುತ್ತದೆ.
For More Updates Join our WhatsApp Group :




