BJPಯಿಂದ ಬೃಹತ್ ಪ್ರತಿಭಟನೆ: Bengaluru Bandh

BJPಯಿಂದ ಬೃಹತ್ ಪ್ರತಿಭಟನೆ: Bengaluru Bandh

ಬೆಂಗಳೂರು: ಆರ್ಸಿಬಿ ವಿಜಯೋತ್ಸವದಲ್ಲಿ 11 ಜನ ಆರ್ಸಿಬಿ ಅಭಿಮಾನಿಗಳು ಸತ್ತಿದ್ದು, ಅವರ ಸಾವಿಗೆ ಸರಕಾರವೇ ನೇರ ಕಾರಣ. ಈ ದುರ್ಘಟನೆಯ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ರಾಜೀನಾಮೆ ಕೊಡಬೇಕೆಂದು ಆಗ್ರಹಿಸಿದ ಬಿಜೆಪಿ ವತಿಯಿಂದ ಫ್ರೀಡಂ ಪಾರ್ಕಿನಲ್ಲಿ ಇಂದು ದೊಡ್ಡ ಪ್ರತಿಭಟನೆ  ಎಂದು ವಿಧಾನ ಪರಿಷತ್ ಸದಸ್ಯರಾದ ಎನ್ ರವಿ ಕುಮಾರ್ ಅವರು ತಿಳಿಸಿದರು.

ಬಿಜೆಪಿ ವತಿಯಿಂದ ದೊಡ್ಡ ಪ್ರತಿಭಟನೆ ನಡೆಯಲಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಜನರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಪ್ರಮುಖರಾದ ಡಾ.ಅಶ್ವತ್ಥನಾರಾಯಣ್, ಗೋಪಾಲಯ್ಯ, ಬೆಂಗಳೂರಿನ ನಮ್ಮ ಸಂಸದರು, ಶಾಸಕರು ಭಾಗವಹಿಸುತ್ತಾರೆ ಎಂದು ಎನ್ ರವಿ ಕುಮಾರ್ ಅವರು ಹೇಳಿದ್ದಾರೆ.

ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸು ದಾಖಲಿಸಿ ಬಂಧಿಸಬೇಕು ಎಂದು ವಿಧಾನಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಆಗ್ರಹಿಸಿದರು. ಟಿ.ಎಫ್.ಹಾದಿಮನಿ, ಮೋದಿಯವರ ಬಗ್ಗೆ ಅತ್ಯಂತ ಅವಹೇಳನಕಾರಿಯಾಗಿರುವ ಪೋಸ್ಟ್ ಅನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಮೋದಿಜೀ ಅವರ ಬಗ್ಗೆ ಕೋಟ್ಯಂತರ ಜನರು ಗೌರವ- ಅಭಿಮಾನ ಹೊಂದಿದ್ದು, ಅವರ ಮನಸ್ಸಿಗೆ ಈ ಪೋಸ್ಟ್ ನೋಡಿ ನೋವಾಗಿದೆ ಎಂದು ತಿಳಿಸಿದರು. ಇದು ಮೋದಿಯವರಿಗೆ ಕೆಟ್ಟ ಹೆಸರು ತರುವ ದೊಡ್ಡ ತಪ್ಪು. ಮೋದಿಯವರ ಚಾರಿತ್ರ್ಯವಧೆ ಮಾಡುವ ಹಾದಿಮನಿ ಮತ್ತು ಇತರರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಯಶವಂತಪುರದ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದೇವೆ. ರಾಜ್ಯ ವಕ್ತಾರ ಮತ್ತು ವಕೀಲ ವೆಂಕಟೇಶ ದೊಡ್ಡೇರಿ ಅವರು ದೂರುದಾರ ಎಂದು ತಿಳಿಸಿದರು. ಎಫ್ಐಆರ್ ಮಾಡುವುದಾಗಿ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ ಎಂದು ಹೇಳಿದರು.

ಬಿಜೆಪಿ ವತಿಯಿಂದ ದೊಡ್ಡ ಪ್ರತಿಭಟನೆ ನಡೆಯಲಿದ್ದು, ಸಹಸ್ರಾರು ಸಂಖ್ಯೆಯಲ್ಲಿ ಜನರು, ಕಾರ್ಯಕರ್ತರು ಭಾಗವಹಿಸಲಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಪ್ರಮುಖರಾದ ಡಾ.ಅಶ್ವತ್ಥನಾರಾಯಣ್, ಗೋಪಾಲಯ್ಯ, ಬೆಂಗಳೂರಿನ ನಮ್ಮ ಸಂಸದರು, ಶಾಸಕರು ಭಾಗವಹಿಸುತ್ತಾರೆ ಎಂದು ಎನ್ ರವಿ ಕುಮಾರ್ ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *