2ನೇ ಅಂತಾರಾಷ್ಟಿçÃಯ ವಿಮಾನ ನಿಲ್ದಾಣಕ್ಕೆ ಎಂ.ಬಿ ಪಾಟಿಲ್ ಚರ್ಚೆ

ಹಳೇ ಮೈಸೂರು ಭಾಗದಲ್ಲಿ 2ನೇ ವಿಮಾನ ನಿಲ್ದಾಣಕ್ಕೆ ಹೆಚ್ಚಿದ ಬೇಡಿಕೆ, ಒತ್ತಡ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ೨ನೇ ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ನಿರ್ಮಿಸುವ ಸಂಬAಧ ವಿಮಾನಯಾನ ವಲಯದ ಪ್ರಮುಖರ ಜೊತೆ ಮೂಲಸೌಕರ್ಯ ಅಭಿವೃದ್ಧಿ ಮತ್ತು ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಬುಧವಾರ ಮತ್ತೊಂದು ಸುತ್ತಿನ ವಿಸ್ತöÈತ ಚರ್ಚೆ ನಡೆಸಿದ್ದಾರೆ.

ಸಭೆ ಬಳಿಕ ಮಾತನಾಡಿದ ಸಚಿವರು, ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮತ್ತು ವಿಮಾನ ಪ್ರಯಾಣಿಕರ ದಟ್ಟಣೆ ಅನುಭವಿಸುತ್ತಿರುವ ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಬೇಕೆನ್ನುವುದರಲ್ಲಿ ಯಾವುದೇ ಅನುಮಾನವಿಲ್ಲ. ಆದರೆ, ಸ್ಥಳದ ಆಯ್ಕೆ ಇತ್ಯಾದಿಗಳನ್ನು ಇನ್ನೂ ಆಖೈರುಗೊಳಿಸಿಲ್ಲ. ಈ ಬಗ್ಗೆ ಮತ್ತಷ್ಟು ಸಮಾಲೋಚನಾ ಸಭೆಗಳನ್ನು ನಡೆಸುವ ಅಗತ್ಯವಿದೆ ಎಂದು ಹೇಳಿದರು.

ಈ ಯೋಜನೆಯನ್ನು ಹೇಗೆ ಮುಂದಕ್ಕೆ ಕೊಂಡೊಯ್ಯಬೇಕು ಎನ್ನುವ ಬಗ್ಗೆ ಉದ್ಯಮಿಗಳು ಮತ್ತು ಸಂಬAಧಿಸಿದ ಅಧಿಕಾರಿಗಳು ಸಭೆಯಲ್ಲಿ ಸಲಹೆಗಳನ್ನು ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ಮತ್ತಷ್ಟು ಸಭೆಗಳು ನಡೆಯಲಿವೆ ಎಂದು ತಿಳಿಸಿದರು.

ಪ್ರಯಾಣಿಕರ ದಟ್ಟಣೆ ಮತ್ತು ಕೈಗಾರಿಕಾ ಅಗತ್ಯ ಎರಡನ್ನೂ ಯೋಜನೆಯಲ್ಲಿ ಪರಿಗಣಿಸುವ ಚಿಂತನೆ ಇದೆ. ಜೊತೆಗೆ ಭೂಮಿಯ ಲಭ್ಯತೆ ಇತ್ಯಾದಿ ತಾಂತ್ರಿಕ ಅಂಶಗಳ ಕಡೆಗೂ ಗಮನಹರಿಸಲಾಗುವುದು ಎಂದು ವಿವರ ನೀಡಿದರು.

ಬೆಂಗಳೂರಿನ ವಿಧಾನಸೌಧದ ಸಚಿವರ ಕಚೇರಿಯಲ್ಲಿ ನಡೆದ ಈ ಮಹತ್ವದ ಸಭೆಯಲ್ಲಿ ಬೆಂಗಳೂರು ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ನಿಯಮಿತದ (ಬಿಐಎಎಲ್) ಸಿಇಒ ಹರಿ ಮರಾರ್, ಕ್ಯಾಪ್ಟನ್ ಗೋಪಿನಾಥ್, ಮುಖ್ಯಮಂತ್ರಿಯವರ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ಕೆ ಅತೀಕ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ ಡಾ.ಎನ್ ಮಂಜುಳಾ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ್, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ಕೋರ್ಲಪಾಟಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *