Heavy Rain Alert: ಸೆಪ್ಟೆಂಬರ್ ಮಳೆಗೆ ಹವಾಮಾನ ಇಲಾಖೆಯ ಎಚ್ಚರಿಕೆ – ಪ್ರವಾಹ, Landslide ಸಾಧ್ಯತೆ

Heavy Rain Alert

ಸೆಪ್ಟೆಂಬರ್ ತಿಂಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚಿನ ಮಟ್ಟದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಸಾಮಾನ್ಯವಾಗಿ, ಪ್ರತಿ ವರ್ಷ ಸೆಪ್ಟೆಂಬರ್‌ನಲ್ಲಿ 167.9 ಮಿ.ಮೀ ಮಳೆಯಾಗುತ್ತದೆ. ಈ ಬಾರಿ, ಸಾಮಾನ್ಯಕ್ಕಿಂತ ಶೇ.109ರಷ್ಟು ಹೆಚ್ಚಿನ ಮಳೆಯಾಗುವ ಸೂಚನೆಗಳಿವೆ ಎಂದು ಹೇಳಿದೆ.

ಈಶಾನ್ಯ ಭಾರತ, ಪೂರ್ವ ಭಾರತ, ದಕ್ಷಿಣ ಭಾರತ ಮತ್ತು ವಾಯುವ್ಯ ಭಾರತದ ಅನೇಕ ಭಾಗಗಳಲ್ಲಿ ಸಾಮಾನ್ಯಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆ ಇದೆ. ದೇಶದ ಉಳಿದ ಭಾಗಗಳಲ್ಲಿ ಸಾಧಾರಣಕ್ಕಿಂತ ಕಡಿಮೆ ಮಳೆಯಾಗುವ ಸಾಧ್ಯತೆಗಳಿವೆ ಎಂದು ಐಎಂಡಿ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ಅವರು ದೆಹಲಿಯಲ್ಲಿ ಭಾನುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

ಸೆಪ್ಟೆಂಬರ್‌ನಲ್ಲಿ ಉತ್ತರಾಖಂಡ, ದಕ್ಷಿಣ ಹರಿಯಾಣ, ದೆಹಲಿ ಮತ್ತು ಉತ್ತರ ರಾಜಸ್ಥಾನದ ಹಲವಾರು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದು ದಿಢೀರ್ ಪ್ರವಾಹ ಮತ್ತು ಭೂಕುಸಿತಕ್ಕೆ ಕಾರಣವಾಗಬಹುದು. ಸಾಮಾನ್ಯ ಜೀವನವನ್ನು ಅಸ್ತವ್ಯಸ್ತಗೊಳಿಸಬಹುದು. ಹೆಚ್ಚಿನ ನದಿಗಳು ಉತ್ತರಾಖಂಡದಲ್ಲಿ ಹುಟ್ಟಿಕೊಳ್ಳುತ್ತವೆ. ಭಾರೀ ಮಳೆಯಿಂದಾಗಿ, ಈ ನದಿಗಳು ಉಕ್ಕಿ ಹರಿಯಬಹುದು. ಹತ್ತಿರದ ನಗರಗಳು ಮತ್ತು ಪಟ್ಟಣಗಳಲ್ಲಿ ಪ್ರವಾಹ ಸೃಷ್ಟಿಯಾಗಲಿದೆ. ಛತ್ತೀಸ್‌ಗಢದ ಮಹಾನದಿಯ ಮೇಲ್ಭಾಗದ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ ಎಂದು ತಿಳಿಸಿದರು.

ಸೆಪ್ಟೆಂಬರ್ ತಿಂಗಳ ತಾಪಮಾನ ಹೀಗಿರಲಿದೆಭಾರತದಲ್ಲಿ 1980ರಿಂದ ಪ್ರತಿ ವರ್ಷವೂ ಸೆಪ್ಟೆಂಬರ್‌ನಲ್ಲಿ ಮಳೆ ಹೆಚ್ಚುತ್ತಿದೆ. 1986, 1991, 2001, 2004, 2010, 2015 ಮತ್ತು 2019 ವರ್ಷಗಳಲ್ಲಿ ಸೆಪ್ಟೆಂಬರ್‌ನಲ್ಲಿ ಕಡಿಮೆ ಮಳೆ ದಾಖಲಾಗಿದೆ. ಆ ತಿಂಗಳಲ್ಲಿ ಪಶ್ಚಿಮ ಮಧ್ಯ ಭಾರತ, ವಾಯುವ್ಯ ಭಾರತ ಮತ್ತು ದಕ್ಷಿಣ ಭಾರತದ ಹೆಚ್ಚಿನ ಭಾಗಗಳಲ್ಲಿ ಮಾಸಿಕ ಸರಾಸರಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆ ಇರುವ ಸಾಧ್ಯತೆಯಿದೆ ಎಂದು ಅವರು ಹೇಳಿದರು.

ಪೂರ್ವ ಮಧ್ಯ ಭಾರತ, ಪೂರ್ವ ಭಾರತ, ಈಶಾನ್ಯ ಭಾರತ, ವಾಯುವ್ಯ ಭಾರತ ಮತ್ತು ಪಶ್ಚಿಮ ಕರಾವಳಿಯ ಅನೇಕ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಹೆಚ್ಚಾಗಿರುತ್ತದೆ ಎಂದು ಅವರು ತಿಳಿಸಿದರು

Leave a Reply

Your email address will not be published. Required fields are marked *