ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ಏರ್ ಲೈನ್ಸ್, ಬ್ಯಾಂಕಿಂಗ್ ಸೇರಿದಂತೆ ಭಾರತದಲ್ಲಿ ಹಲವು ಕ್ಷೇತ್ರಗಳ ಮೇಲೆ ಪರಿಣಾಮ ಬೀರಿದೆ.
ಹೊಸ ಕ್ರೌಡ್ಸ್ಟ್ರೈಕ್ (ಸೈಬರ್ ಸೆಕ್ಯುರಿಟಿ ಸಾಫ್ಟ್ವೇರ್ ಸಂಸ್ಥೆ) ಅಪ್ಡೇಟ್ ಸ್ಥಗಿತಕ್ಕೆ ಕಾರಣ ಎಂದು ಉಲ್ಲೇಖಿಸಲಾಗಿದೆ.
ದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಮೈಕ್ರೋಸಾಫ್ಟ್ ತಾಂತ್ರಿಕ ಸಮಸ್ಯೆ ತಟ್ಟಿದ್ದು ವಿಮಾನ ಕಾರ್ಯಾಚರಣೆಗಳ ಮೇಲೆ ಪರಿಣಾಮ ಉಂಟಾಗಿದೆ.
ಚೆಕ್ ಇನ್, ಬೋರ್ಡಿಂಗ್ ಗಳಲ್ಲಿ ವಿಳಂಬ ಉಂಟಾಗಿ, ಹಲವು ವಿಮಾನಗಳು ರದ್ದುಗೊಂಡವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈಕ್ರೋಸಾಫ್ಟ್ ಸ್ಥಗಿತವು ಹಲವಾರು ವಿಮಾನಯಾನ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ. ದೆಹಲಿ, ಬೆಂಗಳೂರು ಮತ್ತು ಮುಂಬೈ ವಿಮಾನ ನಿಲ್ದಾಣಗಳಲ್ಲಿ ಕಾರ್ಯಾಚರಣೆಯನ್ನು ಅಡ್ಡಿಪಡಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೈಕ್ರೋಸಾಫ್ಟ್ ನ ಸಮಸ್ಯೆಯಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವನ್ನು ನಿನ್ನೆ ರಾತ್ರಿ ರಷ್ಯಾದ ಕ್ರಾಸ್ನೊಯಾರ್ಸ್ಕ್ಗೆ ತಿರುಗುಸಬೇಕಾಯಿತು.
ಈ ವಿಷಯದ ಕುರಿತು ಮಾತನಾಡಿದ ಏರ್ ಇಂಡಿಯಾ ವಕ್ತಾರರು, ಮೈಕ್ರೋಸಾಫ್ಟ್ ಸ್ಥಗಿತವು ವಿಮಾನಯಾನ ವ್ಯವಸ್ಥೆಗಳ ಮೇಲೆ ಪರಿಣಾಮ ಬೀರಿದೆ ಮತ್ತು ಪ್ರಯಾಣಿಕರನ್ನು ಸಾಧ್ಯವಾದಷ್ಟು ಬೇಗ ಸ್ಥಳಾಂತರಿಸುವುದು ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.