ಪಿಜಿಗಳಲ್ಲಿ ಲಂಚ್ ಸೇವೆ ಸ್ಥಗಿತ
ಬೆಂಗಳೂರು: ಎಲ್ಪಿಜಿ ಸಿಲಿಂಡರ್ಗಳ ಅಭಾವ ಕರ್ನಾಟಕದಲ್ಲಿ ಮತ್ತಷ್ಟು ಉಲ್ಬಣಿಸಿದ್ದು, ಬೆಂಗಳೂರಿನ ಕೆಲ ಪೇಯಿಂಗ್ ಗೆಸ್ಟ್ಗಳಲ್ಲಿ (ಪಿಜಿ) ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ತೀವ್ರ ಕೊರತೆಯಿಂದಾಗಿ ಮಧ್ಯಾಹ್ನದ ಊಟದ ಸೇವೆಯನ್ನು ಸ್ಥಗಿತಗೊಳಿಸಲಾಗಿದೆ. ಗ್ಯಾಸ್ ಸಿಲಿಂಡರ್ ಸಮಸ್ಯೆ ಬಗೆಹರಿಯುವವರೆಗೂ ಊಟ ನೀಡದಿರಲು ನಿರ್ಧರಿಸಲಾಗಿದೆ ಎಂದು ಪಿಜಿ ಮಾಲೀಕರು ಘೋಷಿಸಿದ್ದು, ಎಲೆಕ್ಟ್ರಿಕ್ ಸ್ಟವ್ ಅಥವಾ ಸೌದೆ ಬಳಕೆಯಂತಹ ಪರ್ಯಾಯ ವ್ಯವಸ್ಥೆಗಳನ್ನು ರಾತ್ರೋರಾತ್ರಿ ಜಾರಿಗೊಳಿಸುವುದು ಸಾಧ್ಯವಿಲ್ಲ ಎಂದು ಅಲವತ್ತುಕೊಂಡಿದ್ದಾರೆ.
ಇನ್ನು ಗ್ಯಾಸ್ ಹೆಚ್ಚು ಬಳಕೆಯಾಗುವ ಆಹಾರಕ್ಕೆ ಬ್ರೇಕ್ ಹಾಕಿ ಬೆಂಗಳೂರಿನ ಪಿಜಿಗಳ ಊಟದ ಮೆನು ಬದಲಾವಣೆಗೆ ಪಿಜಿ ಮಾಲೀಕರ ಸಂಘ ನಿರ್ಧರಿಸಿದೆ. ಚಪಾತಿ ಹಾಗೂ ದೋಸೆಗಳ ಬದಲು ರೈಸ್ ಐಟಂಗಳತ್ತ ಹೆಚ್ಚು ಒಲವು ತೋರಿ. ತರಕಾರಿ, ಕಾಳುಗಳನ್ನು ವಿತರಿಸಿ ಎಂದು ಎಲ್ಲಾ ಪಿಜಿ ಮಾಲೀಕರಿಗೂ ಅಸೋಷಿಯೇಷನ್ನಿಂದ ಸೂಚನೆ ನೀಡಲಾಗಿದೆ.
ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಗೂ ಸಂಕಷ್ಟ
ಎಲ್ಪಿಜಿ ಸಿಲಿಂಡರ್ ತೀವ್ರ ಕೊರತೆ ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಕೆಯ ಮೇಲೂ ಗಂಭೀರ ಪರಿಣಾಮ ಬೀರಿದೆ. ಮಕ್ಕಳಿಗೆ ಆಹಾರ ತಯಾರಿಸಲು ತಿಂಗಳಿಗೆ ಹಲವು ಸಿಲಿಂಡರ್ಗಳು ಬೇಕಾಗುತ್ತವೆ. ಆದರೆ, ಕೊರತೆಯಿಂದ ಕಡಿಮೆ ಸಂಖ್ಯೆಯಲ್ಲಿ ಸಿಲಿಂಡರ್ ಪೂರೈಕೆಯಾಗಿರೋದು, ಅಡುಗೆ ಸಿಬ್ಬಂದಿ ಮತ್ತು ಶಿಕ್ಷಕರನ್ನು ಆತಂಕಕ್ಕೆ ತಳ್ಳಿದೆ. ಹಳೇ ಬಾಗಲಕೋಟೆಯ 3ನೇ ನಂಬರ್ ಸರ್ಕಾರಿ ಶಾಲೆಯಲ್ಲಿ ಸಿಲಿಂಡರ್ ಕೊರತೆಯಿಂದ ಅಡುಗೆ ತಯಾರಿಸಲು ಸಿಬ್ಬಂದಿಗಳಿಗೆ ಕಷ್ಟವಾಗಿದ್ದು, ಏಜೆನ್ಸಿಯವರು ಒಂದು ಸಿಲಿಂಡರ್ನಲ್ಲಿ ಅಡ್ಜಸ್ಟ್ ಮಾಡಿಕೊಳ್ಳಿ. ನಂತರ ಹೆಚ್ಚಿನ ಸಿಲಿಂಡರ್ಗಳು ಬಂದಾಗ ತಲುಪಿಸುತ್ತೇವೆ ಎಂದು ತಿಳಿಸಿದ್ದಾರೆ. ಒಂದು ಸಿಲಿಂಡರ್ನಲ್ಲಿ ದೊಡ್ಡ ಪ್ರಮಾಣದ ಅಡುಗೆ ತಯಾರಿಸುವುದು ಕಷ್ಟಕರ ಎಂದು ಸಿಬ್ಬಂದಿ ಹೇಳಿದ್ದು, ವಿಷಯವನ್ನು ಮೇಲಾಧಿಕಾರಿಗಳ ಗಮನಕ್ಕೆ ತರಲು ನಿರ್ಧರಿಸಲಾಗಿದೆ.
For More Updates Join our WhatsApp Group :




