ಹಾಸನ: ಹಾಸನದ ಅದಿ ದೇವತೆ ಹಾಸನಾಂಬೆ ಜಾತ್ರೆಗೆ ತೆರೆಬಿದ್ದಿದ್ದು, 9 ದಿನಗಳಲ್ಲಿ ಕೋಟಿ ಕೋಟಿ ಹಣ ಹರಿದು ಬಂದಿದೆ. ಇತಿಹಾಸದಲ್ಲಿಯೇ ಮೊದಲ ಬಾರಿಗೆ ಹಾಸನಾಂಬೆ ದೇವಾಲಯಕ್ಕೆ ದಾಖಲೆ ಪ್ರಮಾಣದಲ್ಲಿ ಆದಾಯ ಸಂಗ್ರಹವಾಗಿದೆ.
ಹಾಸನಾಂಬೆ ದರ್ಶನೋತ್ಸವದಲ್ಲಿ ಕಳೆದ 9 ದಿನಗಳಲ್ಲಿ ಒಟ್ಟು 20 ಲಕ್ಷದ 40 ಸಾವಿರ ಭಕ್ತರು ಆಗಮಿಸಿ ದೇವಿಯ ದರ್ಶನ ಪಡೆದಿದ್ದಾರೆ.
ಭಕ್ತರಿಗೆ 1,000 ರೂ. ಹಾಗೂ 300 ರೂ.ಗಳ ಟಿಕೆಟ್ ಹಾಗೂ ಲಡ್ಡು ಪ್ರಸಾದ ವಿತರಣೆ ಮಾಡಲಾಗಿತ್ತು. ಈ ಎರಡರಿಂದಲೂ 9 ಕೋಟಿ 67 ಲಕ್ಷದ 27 ಸಾವಿರ ರೂಪಾಯಿ ಸಂಗ್ರಹವಾಗಿತ್ತು. ಆದರೆ ಹುಂಡಿ ಎಣಿಕೆ ಕಾರ್ಯ ನಡೆದಿರಲಿಲ್ಲ. ಇಂದು ಹುಂಡಿ ಎಣಿಕೆ ಕಾರ್ಯ ನಡೆದಿದ್ದು, 12 ಕೋಟಿ ರೂ.ಗೂ ಅಧಿಕ ಕಾಣಿಕೆ ಸಂಗ್ರಹವಾಗಿದೆ ಎಂದು ತಿಳಿದಿಬಂದಿದೆ. 7 ಗಂಟೆಗಳ ಕಾಲ 500 ಜನರಿಂದ ಹುಂಡಿ ಎಣಿಕೆ ಕಾರ್ಯ ನಡೆದಿದ್ದು, ಹಾಸನಾಂಬೆ ದರ್ಶನೋತ್ಸವದಲ್ಲಿ ಒಟ್ಟು 12,63,83,808 ಕೋಟಿ ರೂಪಾಯಿ ಸಂಗ್ರಹವಾಗಿದ್ದು, ಇತಿಹಾಸದಲ್ಲಿಯೇ ಮೊದಲ ಬಾರಿ ದೊಡ್ಡ ಪ್ರಮಾಣದಲ್ಲಿ ಕಾಣಿಕೆ ಸಂಗ್ರಹವಾಗಿದೆ