ತುಮಕೂರಿನ ಶ್ರೀ ಸಿದ್ದಾರ್ಥ ಮೆಡಿಕಲ್ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡುರಾವ್…!

ತುಮಕೂರು: ವೈದ್ಯಕೀಯ ಕ್ಷೇತ್ರ ಸೇವಾ ಕ್ಷೇತ್ರವಾಗಿದ್ದು, ಜನರ ಸೇವೆ ಮಾಡುವುದೇ ವೈದ್ಯರ ಪ್ರಥಮ ಆದ್ಯತೆಯಾಗಬೇಕು. ವೈದ್ಯರಲ್ಲಿ ಸೇವಾ ಮನಸ್ಥಿತಿ ಸದಾ ಜಾಗೃತವಾಗಿರಬೇಕು. ಜನರ ಜೀವನವನ್ನು ಬದಲಾಯಿಸುವ ಶಕ್ತಿ ವೈದ್ಯರಿಗೆ ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡುರಾವ್ ಅಭಿಪ್ರಾಯ ಪಟ್ಟರು.

ಆಸ್ಪತ್ರೆ

ಶ್ರೀ ಸಿದ್ದಾರ್ಥ ವೈದ್ಯಕೀಯ ಮಹಾವಿದ್ಯಾಲಯದ ಸೂಪರ್ ಸ್ಪೆಷಾಲಿಟಿ ಹೊರ ರೋಗಿ ವಿಭಾಗ ಹಾಗೂ ಸಿಬ್ಬಂದಿ ವಸತಿ ಗೃಹ ಸಮುಚ್ಚಯದ ಉದ್ಘಾಟನೆ ನೆರವೇರಿಸಿ, ನಂತರ ಗಂಗಾಧರಯ್ಯ ಸ್ಮಾರಕ ಭವನದಲ್ಲಿ ಏರ್ಪಡಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಯಾವುದೇ ಅಭಿವೃದ್ದಿ ಹೊಂದುತ್ತಿರುವ ದೇಶಕ್ಕೆ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದ ಬೆಳವಣಿಗೆ ಅತಿ ಮುಖ್ಯವಾಗುತ್ತದೆ. ಯಾವುದೇ ದೇಶದ ಅಥವಾ ರಾಜ್ಯದ ಆರೋಗ್ಯ ಮತ್ತು ಶೈಕ್ಷಣಿಕ ವಲಯ ಅತ್ಯುತ್ತಮವಾಗಿದ್ದಲ್ಲಿ ಆ ದೇಶವನ್ನು ಅಭಿವೃದ್ದಿ ಹೊಂದಿದ ದೇಶವೆಂದು ಪರಿಗಣಿಸಬಹುದಾಗಿದೆ.

ಸಮಾಜದ ಸಾಮಾನ್ಯ ಮನುಷ್ಯನಿಗೂ ಸಹ ಆರೋಗ್ಯ ಕ್ಷೇತ್ರದಲ್ಲಿ ಉತ್ತಮ ವೈದ್ಯಕೀಯ ಚಿಕಿತ್ಸೆಗಳು ದೊರಕಬೇಕು ಎಂಬುವುದೇ ತಮ್ಮ ಆಶಯವಾಗಿದೆ ಎಂದರು, ವೈದ್ಯ ವೃತ್ತಿ ಅತ್ಯಂತ ಪವಿತ್ರ ಹಾಗೂ ಉತ್ತಮ ವೃತ್ತಿಯಾಗಿದೆ.  ಜನರ ಸೇವೆಯೇ ದೇಶ ಸೇವೆಯಾಗಿದ್ದು, ಈ  ಮೂಲಕ ವೈದ್ಯರು ರಾಷ್ಟç ಸೇವೆಗೆ ತಮ್ಮನ್ನು ತಾವು ಮುಡುಪಾಗಿಡಬೇಕು. ಜನರ ಜೀವನದ ಮೇಲೆ ಪ್ರಭಾವ ಬೀರುವ, ಬದುಕನ್ನು ಬದಲಾಯಿಸುವ ಶಕ್ತಿ ವೈದ್ಯಕೀಯ ಲೋಕಕ್ಕಿದೆ.  ಬಡ ರೋಗಿಗಳು ಆಸ್ಪತ್ರೆಗೆ ಭೇಟಿ ನೀಡಿದಾಗ ಅವರನ್ನು ನಗು ಮುಖದಿಂದ ಮಾತನಾಡಿಸಿ ಉತ್ತಮ ಚಿಕಿತ್ಸೆ ನೀಡಿ ಗುಣಮುಖರಾಗಿ ಕಳುಹಿಸುವ ನಿಟ್ಟಿನಲ್ಲಿ  ವೈದ್ಯರುಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು ಎಂದರು.

ಶ್ರೀ ಸಿದ್ಧಾರ್ಥ ವೈದ್ಯಕೀಯ ಶಿಕ್ಷಣ ಸಂಸ್ಥೆ ಸಕಲ ಆಧುನಿಕ  ವೈದ್ಯಕೀಯ ಸೌಲಭ್ಯ ಹಾಗೂ ಹಚ್ಚ ಹಸಿರಿನ ವಾತಾವರಣವನ್ನೊಳಗೊಂಡ ಅತ್ಯುತ್ತಮ ಸಂಸ್ಥೆಯಾಗಿದೆ ಎಂದು ಅವರು ಶ್ಲಾಘಿಸಿದರು.  ಸಭೆಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್, ಗ್ರಾಮೀಣ ಭಾಗದ ಜನರಿಗೆ ಉತ್ತಮ ಆರೋಗ್ಯ ನೀಡುವಲ್ಲಿ ರಾಜ್ಯ ಸರ್ಕಾರವು ಮುಂಚೂಣಿಯಲ್ಲಿದೆ.   ರಾಜ್ಯದಲ್ಲಿ ಸುಮಾರು ಎರಡೂವರೆ ಸಾವಿರ ಪ್ರಾಥಮಿಕ ಆರೋಗ್ಯ ಕೇಂದ್ರಗಳಿದ್ದು ಗ್ರಾಮೀಣ ಜನರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *