ಬೆಂಗಳೂರು : ಸಚಿವ ಜಮೀರ್ ಅಹ್ಮದ್ಗೆ ಸಂಕಷ್ಟ ಎದುರಾಗಿದೆ. ಸಾಮಾಜಿಕ ಕಾರ್ಯಕರ್ತ ಟಿಜೆ ಅಬ್ರಹಾಂ ಹೈಕೋರ್ಟ್ನಲ್ಲಿ ಜಮೀರ್ ಅಹ್ಮದ್ ಖಾನ್ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದು, ಜಮೀರ್ರವರಿಗೆ ನ್ಯಾಯಂಗ ನಿಂದನೆ ಸಂಕಷ್ಟ ಎದರಾಗಿದೆ.
ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲರು ನೀಡಿದ ಪ್ರಾಸಿಕ್ಯೂಷನ್ ಅನುಮತಿಯನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಇದರು ರಾಜಕೀಯ ಪ್ರೇರಿತ ಎಂಬರ್ಥದಲ್ಲಿ ಸಚಿವ ಜಮೀರ್ ಪ್ರತಿಕ್ರಿಯೆ ನೀಡಿದ್ದರು.
ಸಚಿವರ ಈ ಪ್ರತಿಕ್ರಿಯೆ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ ಅಬ್ರಾಹಂ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದಾರೆ.
ಇದಕ್ಕೂ ಮುನ್ನ ಸಚಿವ ಜಮೀರ್ ತಮ್ಮ ಪ್ರತಿಕ್ರೆಯ ಬಗ್ಗೆ ಮಾತನಾಡಿ, ನನ್ನ ಹೇಳಿಕೆ ಬಾಯಿ ತಪ್ಪಿ ಬಂದಿದೆ. ಹೈಕೋರ್ಟ್ ತೀರ್ಪು ಬಂದ ನಂತರ ಪ್ರತಿಪಕ್ಷಗಳು ರಾಜಕೀಯ ಮಾಡುತ್ತಿವೆ. ಮುಡಾ ಹಗರಣ ಕುರಿತು ತೀರ್ಪನ್ನು ರಾಜಕೀಯಕ್ಕೆ ಬಳಸಿಕೊಳ್ಳಲಾಗುತ್ತಿದೆ ಎಂದಿದ್ದೆ. ನ್ಯಾಯಾಲಯದ ಬಗ್ಗೆ ನನಗೆ ಅಪಾರ ಗೌರವ ಇದೆ. ನ್ಯಾಯಾಲಯದ ತೀರ್ಪಿಗೆ ತಲೆ ಬಾಗುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್ ಹೇಳಿಕೆ ನೀಡಿದ್ದರು