ಬದಲಾವಣೆ ಚರ್ಚೆ ಪಕ್ಷದಲ್ಲಿ ನಡೆದಿಲ್ಲ ಎಂದ ಸಚಿವ ಕೃಷ್ಣ ಬೈರೇಗೌಡ

ಗ್ರಾಮ ಲೆಕ್ಕಿಗರು, ಎಡಿಎಲ್ಆರ್, ಸರ್ವೇಯರ್ ಹುದ್ದೆಗಳಿಗೆ ನೇಮಕಾತಿ

ಬೆಳಗಾವಿ: ಕಾಂಗ್ರೆಸ್ ಪಕ್ಷದ ಹಂತದಲ್ಲಿ ಸಿಎಂ ಬದಲಾವಣೆ ಚರ್ಚ್ಹೆಯೇ ನಡೆದಿಲ್ಲ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೃಷ್ಣ ಬೈರೇಗೌಡ, ಮುಖ್ಯಮಂತ್ರಿ ಸ್ಥಾನಕ್ಕಾಗಿ ಯಾರ್ಯಾರು ಪ್ರಯತ್ನ ಮಾಡುತ್ತಿದ್ದಾರೆ ಅದು ಅವರ ವೈಯಕ್ತಿಕ ವಿಚಾರ.

ನಮ್ಮ ಪಕ್ಷದ ಹಂತದಲ್ಲಿ ಸಿಎಂ ಬದಲಾವಣೆ ಚರ್ಚೆ ನಡೆದಿಲ್ಲ ಎಂದರು.

ಹೈಕಮಾಂಡ್ ನಿಂದ ಹಿಡಿದು ಎಲ್ಲರೂ ಸಿಎಂ ಸಿದ್ದರಾಮಯ್ಯ ಬೆನ್ನಗೆ ನಿಂತಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೆ.ಸಿ.ವೇಣುಗೋಪಾಲ್ ಎಲ್ಲರೂ ನಾವು ಸಿಎಂ ದ್ಸಿದ್ದರಾಮಯ್ಯ ಬೆನ್ನಿಗೆ ನಿಂತಿದ್ದೇವೆ ಎಂದು ನಮಗೆ ಸ್ಪಷ್ಟವಾಗಿ ಹೇಳಿದ್ದಾರೆ. ಹಾಗಾಗಿ ಸಿಎಂ ಬದವಾಣೆ ಎನ್ನುವುದು ಕೇವಲ ಊಹಾಪೋಹ. ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುತ್ತಾರೆ ಎಂದರು.

Leave a Reply

Your email address will not be published. Required fields are marked *