ಬೆಂಗಳೂರು: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ್ ತಮ್ಮ ಅಧಿಕಾರಿಗಳೊಂದಿಗೆ ನಿನ್ನೆ ಕೇಂದ್ರ ವಿಮಾನಯಾನ ಖಾತೆ ಸಚಿವ ಕೆ ರಾಂ ಮೋಹನ್ ನಾಯ್ಡು ಅವರನ್ನು ಭೇಟಿ ಮಾಡಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತಾಡಿದ ಅವರು ಬೆಂಗಳೂರಿನ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಗ್ಗೆ ಸಚಿವರೊಂದಿಗೆ ಚರ್ಚೆಯಾಗಿದೆ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಮತ್ತು ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಿದ್ದಾರೆ, ವರದಿಯನ್ನು ಆದಷ್ಟು ಬೇಗ ತಮಗೆ ನೀಡಿದರೆ ಮುಂದಿನ ತಯಾರಿಗಳನ್ನು ಮಾಡಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಹೇಳಿದ್ದಾಗಿ ಪಾಟೀಲ್ ತಿಳಿಸಿದರು.

ಕೇಂದ್ರ ಸಚಿವರೊಂದಿಗೆ ಮೈಸೂರು, ಕಲಬುರಗಿ, ಶಿವಮೊಗ್ಗ, ವಿಜಯಪುರ ಮತ್ತು ಹಾಸನ ವಿಮಾನ ನಿಲ್ದಾಣಗಳ ಬಗ್ಗೆಯೂ ಚರ್ಚಿಸಲಾಯಿತು ಎಂದು ಪಾಟೀಲ್ ಹೇಳಿದರು.



