ಬೆಂಗಳೂರು: ಗುತ್ತಿಗೆದಾರನ ವಿರುದ್ಧ ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಮಾಡಿರುವ ಆರೋಪದಡಿ ಬಂಧನಕ್ಕೊಳಗಾಗಿರುವ BJP ಶಾಸಕ ಮುನಿರತ್ನರನ್ನು 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ.
ಇದನ್ನು ಓದಿ : ಜೀವ ಬೆದರಿಕೆ, ಜಾತಿ ನಿಂದನೆ ಆರೋಪ: ಶಾಸಕ ಮುನಿರತ್ನ ಬಂಧನ
ಶನಿವಾರ ಪೊಲೀಸರು ಮುನಿರತ್ನ ಅವರನ್ನು ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಗ್ರಾಮದ ಬಳಿ ಬಂಧಿಸಿ ಕರೆತಂದರು. ರಾತ್ರಿ ಆರೋಗ್ಯ ತಪಾಸಣೆ ನಡೆಸಿ, ಬಳಿಕ ನ್ಯಾಯಾಧೀಶರ ಮುಂದೆ ಹಾಜರು ಪಡಿಸಿದರು.
ಈ ವೇಳೆ ಪೊಲೀಸರು ಒಂದು ವಾರ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರಿಗೆ ಮನವಿ ಮಾಡಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು, ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದರು.