ಚಿಕ್ಕಬಳ್ಳಾಪುರ: ಶಾಸಕ ಪ್ರದೀಪ್ ಈಶ್ವರ್ ಮನೆಯ ಮೇಲೆ ಕಳೆದ ರಾತ್ರಿ ಕಿಡಿಗೇಡಿಗಳು ಕಲ್ಲು ತೂರಾಟ ಮಾಡಿದ್ದಾರೆ.
ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಗೃಹ ಕಚೇರಿ ನಿವಾಸದ ಮೇಲೆ ಕಲ್ಲು ತೂರಾಟ ಮಾಡಲಾಗಿದ್ದು, ಮನೆಯ ಬೃಹತ್ ಗಾತ್ರದ ಕಿಟಕಿ ಗಾಜು ಪುಡಿಪುಡಿಯಾಗಿದೆ. ಕಳೆದ ರಾತ್ರಿ 10:30 ರಿಂದ 11 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಮನೆಗೆ ಚಿಕ್ಕಬಳ್ಳಾಪುರ ಡಿವೈಎಸ್ಪಿ ಶಿವಕುಮಾರ್ ಹಾಗೂ ವೃತ್ತ ನಿರೀಕ್ಷಕ ಮಂಜುನಾಥ್ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮನೆಯ ಹಿಂಭಾಗದಲ್ಲಿ ಸಿಸಿಟಿವಿ ಅಳವಡಿಸಲಾಗಿದ್ದು, ಕಲ್ಲು ತೂರಾಟ ಮಾಡಿದವರ ಪತ್ತೆಗೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ಈ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ