ಬೆಂಗಳೂರು: ರಾಜ್ಯದಲ್ಲಿ ಹಲವು ದಿನಗಳಿಂದ ಅಬ್ಬರಿಸುತ್ತಿದ್ದ ಮಳೆಗೆ ಇದೀಗ ಸ್ವಲ್ಪ ಬಿಡುವು ಸಿಕ್ಕಿದೆ. ಇಂದು ಕರಾವಳಿಯ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಇರಲಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಕಂಡುಬರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆ?
ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡದ ಒಂದೆರಡು ಕಡೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಣ್ಣ ಪ್ರಮಾಣದ ಮಳೆಯನ್ನು ನಿರೀಕ್ಷಿಸಲಾಗಿದೆ.
ಹೆಚ್ಚಿನ ಪ್ರದೇಶಗಳಲ್ಲಿ ಒಣ ಹವೆ
ಉತ್ತರ ಒಳನಾಡು ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರದಲ್ಲಿ ಸಂಪೂರ್ಣವಾಗಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ತುಮಕೂರು, ಹಾಸನ, ಚಿತ್ರದುರ್ಗ, ದಾವಣಗೆರೆ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಮಳೆ ಸಾಧ್ಯತೆ ತೀರಾ ವಿರಳವಾಗಿರಲಿದೆ.
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ
ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ತಾಪಮಾನ 27°C ಮತ್ತು ಕನಿಷ್ಠ ತಾಪಮಾನ 19°C ಇರಲಿದೆ. ಗಾಳಿಯ ವೇಗ ಗಂಟೆಗೆ 22-24 ಕಿ.ಮೀ. ಇರಲಿದೆ. ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
For More Updates Join our WhatsApp Group :




