ನವದೆಹಲಿ: ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರದ 28 ಸಚಿವರ ವಿರುದ್ಧ ಕ್ರಿಮಿನಲ್ ಮೊಕದ್ದಮೆಗಳಿವೆ ಎಂದು ಅಸೋಸಿಯೇಷನ್ ಆಫ್ ಡೆಮಾಕ್ರಟಿಕ್ ರಿಫಾರ್ಮ್ಸ್(ಎಡಿಆರ್) ಬುಧಾರ ಹೇಳಿದೆ.
ಮೋದಿ ನೂತನ ಸಂಪುಟದ 28 ಸಚಿವರ ವಿರುದ್ಧ ಕ್ರಿಮಿನಲ್ ಪ್ರಕರಣ ಇದ್ದು, ಆ ಪೈಕಿ 19 ಸಚಿವರು ಕೊಲೆ ಯತ್ನ, ಮಹಿಳೆಯರ ವಿರುದ್ಧದ ಅಪರಾಧಗಳು ಮತ್ತು ದ್ವೇಷ ಭಾಷಣದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಂದು ಚುನಾವಣಾ ಹಕ್ಕುಗಳ ಸಂಸ್ಥೆ ಎಡಿಆರ್ ತಿಳಿಸಿದೆ.
ಅತ್ಯಂತ ಗಂಭೀರವಾಗ ಆರೋಪಗಳನ್ನು ಎದುರಿಸುತ್ತಿರುವ ಸಚಿವರ ಪೈಕಿ ಇಬ್ಬರು ಭಾರತೀಯ ದಂಡ ಸಂಹಿತೆ ಸೆಕ್ಷನ್ 307 ರ ಅಡಿಯಲ್ಲಿ ಕೊಲೆ ಯತ್ನಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸುತ್ತಿರುವುದಾಗಿ ಘೋಷಿಸಿದ್ದಾರೆ. ಬಂದರು, ಹಡಗು ಮತ್ತು ಜಲಮಾರ್ಗಗಳ ಖಾತೆ ರಾಜ್ಯ ಸಚಿವ ಶಾಂತನು ಠಾಕೂರ್ ಮತ್ತು ಶಿಕ್ಷಣ ಮತ್ತು ಅಭಿವೃದ್ಧಿ ಖಾತೆ ರಾಜ್ಯ ಸಚಿವ ಸುಕಾಂತ ಮಜುಂದಾರ್ ಅವರು ಗಂಭೀರ ಆರೋಪಗಳನ್ನು ಎದುರಿಸುತ್ತಿದ್ದಾರೆ ಎಡಿಆರ್ ಹೇಳಿದೆ