ಅಸ್ಸಾಂನಲ್ಲಿ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ.

ಅಸ್ಸಾಂನಲ್ಲಿ ಕಾಂಗ್ರೆಸ್ ವಿರುದ್ಧ ಮೋದಿ ವಾಗ್ದಾಳಿ.

“ಹಿಂಸಾಚಾರಕ್ಕೆ ಕುಮ್ಮಕ್ಕು, ಅಭಿವೃದ್ಧಿಗೆ ನಿರ್ಲಕ್ಷ್ಯ” ಆರೋಪ.

ಗುವಾಹಟಿ : ಪ್ರಧಾನಿ ನರೇಂದ್ರ ಮೋದಿ ಇಂದು ಅಸ್ಸಾಂನ ಗುವಾಹಟಿಯಲ್ಲಿ ನಡೆಯುತ್ತಿರುವ ಬೃಹತ್ ಸಾರ್ವಜನಿಕ ರ‍್ಯಾಲಿಯಲ್ಲಿ ಕಾಂಗ್ರೆಸ್ ಪಕ್ಷದ ಮೇಲೆ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಅನುಸರಿಸಿತು, ರಕ್ಷಣಾ ಒಪ್ಪಂದಗಳಲ್ಲಿ ಭ್ರಷ್ಟಾಚಾರ ಮಾಡಿತು, ಅಸ್ಸಾಂನಲ್ಲಿ ಹಿಂಸಾಚಾರಕ್ಕೆ ಕಾರಣವಾಯಿತು, ಈಶಾನ್ಯ ರಾಜ್ಯಗಳನ್ನು ನಿರ್ಲಕ್ಷ್ಯ ಮಾಡಿತು ಎಂದು ಮೋದಿ ಆರೋಪಿಸಿದ್ದಾರೆ.

ಅಸ್ಸಾಂನ ಗುವಾಹಟಿಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಭಾರತವನ್ನು ವಲಸಿಗರ ಕೈಗೆ ಒಪ್ಪಿಸಲು ಮುಂದಾಗಿತ್ತು. ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್ ಭಾರತವನ್ನು ವಿಭಜಿಸಿತ್ತು. ಇಂದು ಕಾಂಗ್ರೆಸ್ ಮುಸ್ಲಿಂ ಲೀಗ್-ಮಾವೋವಾದಿ ಕಾಂಗ್ರೆಸ್ ಆಗಿ ಮಾರ್ಪಟ್ಟಿದೆ. ಅದು ಭಾರತವನ್ನು ವಿಭಜಿಸುವ ಪ್ರಯತ್ನದಲ್ಲಿದೆ. ಕಾಂಗ್ರೆಸ್ ಆಡಳಿತದಲ್ಲಿ ಅಸ್ಸಾಂನಲ್ಲಿ ಅಸ್ಥಿರತೆ ಉಂಟಾಗಿತ್ತು. ಬಿಜೆಪಿ ಅದನ್ನು ಬದಲಾಯಿಸಿತು. ನಾನು ಅಸ್ಸಾಂನಲ್ಲಿ ಅಭಿವೃದ್ಧಿಯ ಕಾರ್ಯಗಳಿಗೆ ಆದ್ಯತೆ ನೀಡುತ್ತಿದ್ದೇನೆ. ಬಿಜೆಪಿ ಅಸ್ಸಾಂನ ಚಿತ್ರಣವನ್ನೇ ಬದಲಾಯಿಸುತ್ತದೆ” ಎಂದು ಅವರು ಹೇಳಿದ್ದಾರೆ.

2019ರ ಪುಲ್ವಾಮಾ ಭಯೋತ್ಪಾದಕ ದಾಳಿಯನ್ನು ಉಲ್ಲೇಖಿಸಿದ ಪ್ರಧಾನಿ ಮೋದಿ, ಆ ಘಟನೆಯಲ್ಲಿ ಜೀವ ಕಳೆದುಕೊಂಡ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಿದರು. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತದ ಪ್ರತಿಕ್ರಿಯೆಯಾಗಿ ನಡೆದ ಆಪರೇಷನ್ ಸಿಂಧೂರ್ ಬಗ್ಗೆಯೂ ಮಾತನಾಡಿದ ಮೋದಿ, “ಭಯೋತ್ಪಾದಕ ಬೆದರಿಕೆಗಳಿಗೆ ಪ್ರತಿಕ್ರಿಯಿಸುವಲ್ಲಿ ಭಾರತ ತನ್ನ ಸಂಕಲ್ಪವನ್ನು ಪ್ರದರ್ಶಿಸಿದೆ. ಆದರೆ, ಕಾಂಗ್ರೆಸ್​​ನ ಸುದೀರ್ಘ ಆಡಳಿತದಲ್ಲಿ ಅದು ಈ ರೀತಿಯ ಧೈರ್ಯದ ನಿರ್ಧಾರಗಳನ್ನು ಎಂದೂ ತೆಗೆದುಕೊಳ್ಳಲಿಲ್ಲ” ಎಂದು ಹೇಳಿದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *