ಮಂಡ್ಯದಲ್ಲಿ ಮೋದಿ ಭಾಷಣ ಹೈಲೈಟ್.!

ಮಂಡ್ಯದಲ್ಲಿ ಮೋದಿ ಭಾಷಣ ಹೈಲೈಟ್.!

ರಾಗಿ ಮುದ್ದೆ ಗುಣಗಾನ – ಕರ್ನಾಟಕದ ದೇಸಿ ಆಹಾರಕ್ಕೆ ಮೆಚ್ಚುಗೆ.

ಮಂಡ್ಯ: ರಾಗಿ ಮುದ್ದೆ ಕೇವಲ ಆಹಾರವಲ್ಲ ಅದೊಂದು ಶಕ್ತಿ, ಮಂಡ್ಯದಲ್ಲಿ ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರು ಅದನ್ನು ಫೇಮಸ್ ಮಾಡಿದ್ದಾರೆ, ಯುವಕರು ರಾಗಿ ಮುದ್ದೆ ಹಾಗೂ ನವಧಾನ್ಯಗಳನ್ನು ಹೆಚ್ಚು ಸೇವಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಮಂಡ್ಯದ ಆದಿಚುಂಚನಗಿರಿ ಮಠದಲ್ಲಿ ಶ್ರೀ ಗುರು ಭೈರವೈಕ್ಯ ಮಂದಿರವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಕರ್ನಾಟಕದ ಸಂಸ್ಕೃತಿ ಮತ್ತು ಮಠದ ಸೇವೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದರು.

ಕರ್ನಾಟಕಕ್ಕೆ ಬರುವುದೆಂದರೆ ನನಗೆ ಖುಷಿಯ ವಿಷಯ. ಇಲ್ಲಿಗೆ ಬಂದಾಗಲೆಲ್ಲಾ ಹೊಸ ಪ್ರೇರಣೆ ಸಿಗುತ್ತದೆ. ಅದರಲ್ಲೂ ಸಕ್ಕರೆ ನಾಡು ಮಂಡ್ಯಕ್ಕೆ ಬಂದಿರುವುದು ಈ ಭೇಟಿಯನ್ನು ಇನ್ನಷ್ಟು ಮಹತ್ವಪೂರ್ಣವಾಗಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನುಡಿದರು.

ತತ್ವಜ್ಞಾನ ಮತ್ತು ತಂತ್ರಜ್ಞಾನದ ಸಮೃದ್ಧಿ ಕರ್ನಾಟಕದ ಮಣ್ಣಿನ ಗುಣವನ್ನು ಬಣ್ಣಿಸಿದ ಪ್ರಧಾನಿ, ಈ ಮಣ್ಣು ತತ್ವಜ್ಞಾನ ಮತ್ತು ತಂತ್ರಜ್ಞಾನ ಎರಡರಲ್ಲೂ ಸಮೃದ್ಧವಾಗಿದೆ. ಇಲ್ಲಿ ದರ್ಶನದ ಆಳವೂ ಇದೆ, ಟೆಕ್ನಾಲಜಿಯ ಶಕ್ತಿಯೂ ಇದೆ. ಆದಿಚುಂಚನಗಿರಿ ಮಠವು ಕಳೆದ ಎರಡು ಸಾವಿರ ವರ್ಷಗಳಿಂದ ಭಾರತದ ನೈತಿಕ ಮತ್ತು ಆಧ್ಯಾತ್ಮಿಕ ಮೌಲ್ಯಗಳನ್ನು ಜೀವಂತವಾಗಿರಿಸಿರುವ ಸಾಕ್ಷಾತ್ ರೂಪ ಎಂದರು.

ಆದಿಚುಂಚನಗಿರಿ ಮಠವು ಕೇವಲ ಧಾರ್ಮಿಕ ಕೇಂದ್ರವಾಗಿರದೆ, ಶಿಕ್ಷಣ ಮತ್ತು ಸಮಾಜ ಸೇವೆಯಲ್ಲಿ ದೇಶದಾದ್ಯಂತ ಗುರುತಿಸಿಕೊಂಡಿದೆ. ಪ್ರಧಾನಿಗಳ ಈ ಭೇಟಿಯು ಮಠದ ಸಾಮಾಜಿಕ ಮತ್ತು ಆಧ್ಯಾತ್ಮಿಕ ಕಾರ್ಯಗಳಿಗೆ ಮತ್ತಷ್ಟು ಬಲ ನೀಡಿದಂತಾಗಿದೆ. ಪ್ರಸ್ತುತ ಪೀಠಾಧ್ಯಕ್ಷರಾದ  ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಈ ಸಮಾರಂಭದ ನೇತೃತ್ವ ವಹಿಸಿದ್ದರು.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *