ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಗೆ 6೦೦, ಡೆಪ್ಯುಟಿ ಸಬ್ ಇನ್ಸ್ಪೆಕ್ಟರ್ ಗೆ 2೦೦೦ ಹಾಗೂ ಪೊಲೀಸ್ ಕಾನ್ಸ್ಟೇಬಲ್ ಗೆ 15೦೦ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದ್ದು, ಒಟ್ಟು 4.115 ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಪ್ರಸ್ತಾವನೆ ಹೊರಡಿಸಲಾಗಿದೆ. ಕಾನ್ಸ್ಟೇಬಲ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 10ನೇ ತರಗತಿ ಪಾಸ್ ಆಗಿರಬೇಕು ಹಾಗೂ ಸಿವಿಲ್ ಕಾನ್ಸ್ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು 12ನೇ ತರಗತಿ ಪಾಸ್ ಆಗಿರಬೇಕು. ಪೊಲೀಸ್ ಸಬ್ ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಯಾವುದಾದರೂ ಒಂದು ವಿಷಯದಲ್ಲಿ ಪದವಿ ಮುಗಿಸಬೇಕು. ಈ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಈಗಾಗಲೇ ಆರ್ಥಿಕ ಇಲಾಖೆಯಿಂದ ಅನುಮೋದನೆ ದೊರೆತಿದ್ದು, ಗೃಹ ಇಲಾಖೆಯಿಂದ ಆದೇಶ ಬಂದರೆ, ಬಂದ 40 ದಿನದ ಒಳಗಾಗಿ ಅಧಿಸೂಚನೆ ಹೊರಡಿಸುವ ಸಾಧ್ಯತೆಗಳಿವೆ.
ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಭರ್ಜರಿ 4 ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ!
