ತುಮಕೂರಿನಲ್ಲಿ ಹೃದಯವಿದ್ರಾವಕ ಘಟನೆ.
ತುಮಕೂರು: 8 ವರ್ಷದ ಮಗನ ಜೊತೆಗೆ ಕೆರೆಗೆ ಹಾರಿ ತಾಯಿ ಆತ್ಮಹತ್ಯೆಮಾಡಿಕೊಂಡಿರುವಂತಹ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂಬೆಳ್ಳ ಕೆರೆಯಲ್ಲಿ ನಡೆದಿದೆ. ತುಮಕೂರು ತಾಲೂಕಿನ ಸೋರೆಕುಂಟೆ ಗ್ರಾಮದ ತಾಯಿ ಹಂಸಲೇಖ(36) ಮತ್ತು ಪುತ್ರ ಗುರುಪ್ರಸಾದ್(8) ಮೃತರು. ಸ್ಥಳಕ್ಕೆ ಕಳ್ಳಂಬೆಳ್ಳ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಕೆರೆಯಿಂದ ತಾಯಿ, ಮಗನ ಮೃತದೇಹವನ್ನು ಪೊಲೀಸರು ಹೊರತೆಗೆದಿದ್ದಾರೆ. ಮರಣೋತ್ತರ ಪರೀಕ್ಷೆಗೆ ಶವಗಳು ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ.
ಭೂಪಸಂದ್ರ ಗ್ರಾಮದ ನಾಗೇಶ್ ಜೊತೆಗೆ ಹಂಸಲೇಖರ ಮದುವೆಯಾಗಿತ್ತು. ಅನಾರೋಗ್ಯದಿಂದ ಹಂಸಲೇಖ ಪತಿ ನಾಗೇಶ್ ಮೃತಪಟ್ಟಿದ್ದರು. ದಂಪತಿಗೆ ಇಬ್ಬರು ಗಂಡು ಮಕ್ಕಳು ಇದ್ದಾರೆ. 3 ವರ್ಷದ ಹಿಂದೆ ನಾಗೇಶ್ ಸಹೋದರ ಲೋಕೇಶ್ ಜತೆ ಹಂಸಲೇಖಳಿಗೆ ಮದುವೆ ಮಾಡಿ ಕೊಡಲಾಗಿತ್ತು. ಆದರೆ ಏಕಾಏಕಾ ಇಂದು ಬೆಳಗ್ಗೆ ಕೆರೆಯಲ್ಲಿ ಮಗನ ಜೊತೆಗೆ ತಾಯಿಯ ಶವ ಪತ್ತೆ ಆಗಿದೆ.
ಕೆಎಸ್ಆರ್ಟಿಸಿಬಸ್ಡಿಕ್ಕಿ: ಬೈಕ್ನಲ್ಲಿದ್ದಇಬ್ಬರುಸ್ಥಳದಲ್ಲೇಸಾ*
ಬೈಕ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತಹ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಎ.ಚೋಳೇನಹಳ್ಳಿ ಬಳಿ ನಡೆದಿದೆ. ದಡದಹಳ್ಳಿ ನಿವಾಸಿಗಳಾದ ಸುನೀಲ್(20) ಮತ್ತು ಶೃಂಗಾರ್(18) ಮೃತ ಯುವಕರು.
KA 13 EQ 1866 ಸಂಖ್ಯೆಯ ಬೈಕ್ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಅಜಾಗರೂಕತೆಯಿಂದ ಬಸ್ ಚಲಾಯಿಸಿ ಚಾಲಕ ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಕೆಎಸ್ಆರ್ಟಿಸಿ ಬಸ್ ಚಾಲಕನ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚನ್ನರಾಯಪಟ್ಟಣ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
For More Updates Join our WhatsApp Group :




