ತುಮಕೂರು:-ಕೌಟುಂಬಿಕ ಕಲಹಕ್ಕೆ ಬೇಸತ್ತು ಇಬ್ಬರು ಮಕ್ಕಳ ಜೊತೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ.
ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದು, ಹಸೀನಾ ತಾಜ್ (35), ಅಫೀಜ್ (8), ಅಲ್ಕೀಜ್ (4), ಆತ್ಮಹತ್ಯೆ ಮಾಡಿಕೊಂಡವರು.
ಮಧುಗಿರಿ ತಾಲೂಕಿನ ಸಿದ್ದಪುರ ಕೆರೆಯಲ್ಲಿ ಘಟನೆ ನಡೆದಿದೆ.
ಮಧುಗಿರಿ ಪಟ್ಟಣದಲ್ಲಿ ಗಂಡ ಹಾಗೂ ಇಬ್ಬರು ಮಕ್ಕಳ ಜೊತೆ ವಾಸವಾಗಿದ್ದ ಹಸೀನಾ ತಾಜ್, ಮಧುಗಿರಿ ಬಳಿಯಿರುವ ಸಿದ್ದಾಪುರ ಕೆರೆಗೆ ತನ್ನ ಇಬ್ಬರು ಮಕ್ಕಳ ಜೊತೆ ಕೆರೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಂಡನ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಹೇಳಲಾಗ್ತಿದೆ. ಸ್ಥಳಕ್ಕೆ ಮಧುಗಿರಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆ ಸಂಬಂಧ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.