ಮಲಯಾಳಂ ಚಿತ್ರರಂಗಕ್ಕೆ ಶೋಕ.

ಮಲಯಾಳಂ ಚಿತ್ರರಂಗಕ್ಕೆ ಶೋಕ.

ಖ್ಯಾತ ನಟ–ನಿರ್ದೇಶಕ ಶ್ರೀನಿವಾಸನ್ ನಿಧನ.

ಖ್ಯಾತ ಮಲಯಾಳಂ ನಟ, ನಿರ್ದೇಶಕ ಶ್ರೀನಿವಾಸನ್ ಇಂದು ನಿಧನ ಹೊಂದಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು. ಹಲವು ವರ್ಷಗಳಿಂದ ಅವರು ವಿವಿಧ ಕಾಯಿಲೆಯಿಂದ ಬಳಲುತ್ತಿದ್ದರು. ಅವರು ಕೇರಳದ ಉದಯಂಪೆರೂರ್​​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನ ಹೊಂದಿದ್ದಾರೆ.

ಶ್ರೀನಿವಾಸನ್ ಅವರಿಗೆ ಕೆಲವು ಅನಾರೋಗ್ಯ ಸಮಸ್ಯೆಗಳು ಇದ್ದವು. ಕಳೆದ ಕೆಲ ವರ್ಷಗಳಿಂದ ಅವರ ಆರೋಗ್ಯ ಹದಗೆಟ್ಟಿತ್ತು. ಹೀಗಾಗಿ, ಸಿನಿಮಾ ರಂಗದಲ್ಲಿ ಅವರು ಅಷ್ಟಾಗಿ ಆ್ಯಕ್ಟೀವ್ ಆಗಿರಲಿಲ್ಲ. ಇತ್ತೀಚೆಗೆ ಅವರನ್ನು ಆಸ್ಪತ್ರೆಗೂ ದಾಖಲು ಮಾಡಲಾಗಿತ್ತು. ಆದರೆ, ಅವರನ್ನು ಬದುಕಿಸಿಕೊಳ್ಳಲು ವೈದ್ಯರ ಬಳಿ ಸಾಧ್ಯವಾಗಿಲ್ಲ.

ನಟನಾಗಿ, ಸಿನಿಮಾ ಬರಹಗಾರನಾಗಿ, ನಿರ್ದೇಶಕನಾಗಿ ಅವರು ಗುರುತಿಸಿಕೊಂಡಿದ್ದರು. ಅವರ ನಿಧನವು ಮಲಯಾಳಂ ಚಿತ್ರರಂಗಕ್ಕೆ ತುಂಬಲಾರದ ನಷ್ಟವಾಗಿದೆ. ಅವರ ಸಾವಿಗೆ ಅನೇಕ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಮಲಯಾಳಂ ಚಿತ್ರರಂಗದ ಸ್ಟಾರ್ ಹೀರೋಗಳ ಜೊತೆ ಅವರಿಗೆ ಒಳ್ಳೆಯ ಒಡನಾಟ ಇತ್ತು. ಕೇರಳದ ಕಣ್ಣೂರ್ ಜಿಲ್ಲೆಯಲ್ಲಿ 1956ರ ಏಪ್ರಿಲ್ 6ರಂದು ಶ್ರೀನಿವಾಸನ್ ಜನಿಸಿದರು. ಅವರು ಅರ್ಥ ಶಾಸ್ತ್ರದಲ್ಲಿ ಪದವಿ ಪಡೆದಿದ್ದಾರೆ. ಆ ಬಳಿಕ ಚೆನ್ನೈನಲ್ಲಿ ಅವರು ಫಿಲ್ಮ್​ ಆ್ಯಂಡ್ ಟೆಲಿವಿಷನ್ ಸಂಸ್ಥೆಯಲ್ಲಿ ಸಿನಿಮಾ ಸಂಬಂಧಿತ ತರಬೇತಿ ಪಡೆದರು.

1976ರ ‘ಮನಿಮುಳಕ್ಕಮ್’ ಅವರ ನಟನೆಯ ಮೊದಲ ಸಿನಿಮಾ. ಆ ಬಳಿಕ ಹಲವು ಸಿನಿಮಾಗಳಲ್ಲಿ ಅಭಿನಯಿಸಿದರು. ವೃತ್ತಿ ಜೀವನದುದ್ದಕ್ಕೂ 2-3 ತಮಿಳು ಸಿನಿಮಾ ಮಾಡಿದ್ದು ಹೊರತುಪಡಿಸಿ ಉಳಿದ ಎಲ್ಲಾ ಚಿತ್ರಗಳನ್ನು ಅವರು ಮಾಡಿದ್ದು ಮಲಯಾಳಂನಲ್ಲಿಯೇ. ಸುಮಾರು 40 ವರ್ಷಗಳ ಕಾಲ ಚಿತ್ರರಂಗದಲ್ಲಿ ಶ್ರಮಿಸಿದ ಅವರು, 200ಕ್ಕೂ ಅಧಿಕ ಸಿನಿಮಾ ಮಾಡಿದ್ದಾರೆ. ಅವರು ಕೊನೆಯ ಬಾರಿಗೆ ಬಣ್ಣ ಹಚ್ಚಿದ್ದು 2018ರಲ್ಲಿ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *