ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿಕೊಟ್ಟಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಕಾರ್ಯದರ್ಶಿ ರಾಜೇಶ್ ವರ್ಮಾ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಪತ್ರ ಬರೆದಿದದು, ಪ್ರಾಸಿಕ್ಯೂಷನ್ ಗೆ ಸಂಬಂಧ ಪಟ್ಟಂತೆ ಗಮನ ಹರಿಸಿ ಎಂದು ಹೇಳಿದ್ದಾರೆ.
ಈ ಮೂಲಕ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿಗಳ ಎಂಟ್ರಿ ಆಗಿದೆ.ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಮುಖಂಡ ರಮೇಶ್ ಬಾಬು ಪತ್ರ ಬರೆದಿದ್ದರು. ಇದೀಗ ಪತ್ರಕ್ಕೆ ರಾಷ್ಟ್ರಪತಿಗಳು ಉತ್ತರಿಸಿದ್ದಾರೆ.