ಬೆಂಗಳೂರು: ಮುಡಾ ಕೇಸ್‍ಗೆ (MUDA Scam) ಸಂಬಂಧಿಸಿದಂತೆ ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಹೈಕೋರ್ಟ್‍ಗೆ (High Court) ಅರ್ಜಿ ಸಲ್ಲಿಸಿದ್ದಾರೆ.
ಸಿಎಂ ಪರ ವಕೀಲರಾದ ಶತಬೀಷ್ ಶಿವಣ್ಣ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಬಳಿಕ ಕೋರ್ಟ್ ಕಲಾಪ ಆರಂಭವಾಗುತ್ತಿದ್ದಂತೆ ನ್ಯಾ.ಹೇಮಂತ್ ಚಂದನ್ ಗೌಡರ್ ಪೀಠದ ಮುಂದೆ ಅರ್ಜಿ ವಿಚಾರಣೆಗೆ ಸಿಎಂ ಪರ ಹಿರಿಯ ವಕೀಲ ಪ್ರೊ.ರವಿವರ್ಮ ಕುಮಾರ್ ಮನವಿ ಮಾಡಿದರು. ಈ ವೇಳೆ ವಕೀಲರ ಮನವಿಗೆ, ಅಷ್ಟು ಆತುರ ಏನಿದೆ ಎಂದು ಜಡ್ಜ್ ಪ್ರಶ್ನಿಸಿದರು.
ಈ ವೇಳೆ ವಕೀಲರು, ರಾಜ್ಯಪಾಲರು ಪ್ರಾಸಿಕ್ಯೂಷನ್‍ಗೆ ಅನುಮತಿ ನೀಡಿದ್ದಾರೆ. ಹೀಗಾಗಿ ರಾಜ್ಯಪಾಲರ ಆದೇಶ ಪ್ರಶ್ನೆ ಮಾಡಲಾಗುತ್ತಿದೆ. ದೂರುದಾರರು ಕೇವಿಯೆಟ್ ಕೂಡ ಹಾಕಿದ್ದಾರೆ ಎಂದು ಮಾಹಿತಿ ನೀಡಿದರು. ಇದೀಗ ನ್ಯಾಯಮೂರ್ತಿಗಳು ಮಧ್ಯಾಹ್ನ 2:30ಕ್ಕೆ ವಿಚಾರಣೆ ನಿಗದಿ ಮಾಡಿದ್ದಾರೆ.
ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠದ ಮುಂದೆ ಸಹ ಅರ್ಜಿ ಸಲ್ಲಿಕೆ ಮಾಡಲಾಗಿದೆ. ಒಂದೇ ಅರ್ಜಿಯನ್ನು ಎರಡೂ ಪೀಠದಲ್ಲೂ ಮಾಡಲಾಗಿದೆ. ಮುಖ್ಯ ನ್ಯಾಯಾಮೂರ್ತಿಯವರಿಂದ ಮಧ್ಯಾಹ್ನ ಪೀಠ ನಿಗದಿ ಮಾಡಿ, ಯಾವುದಾದರೂ ಒಂದು ಪೀಠದಲ್ಲಿ ಅರ್ಜಿ ವಿಚಾರಣೆ ನಡೆಸಲು ತೀರ್ಮಾನಿಸಲಾಗಿದೆ.