ರಾಜ್ಯ ಬಜೆಟ್ ವಿರುದ್ಧ ವಿಧಾನಸೌಧದ ಬಳಿ ಬಿಜೆಪಿ ಪ್ರತಿಭಟನೆ; ಕಾಂಗ್ರೆಸ್ ಜಾಹೀರಾತಿಗೆ ತಿರುಗೇಟು.
ಬೆಂಗಳೂರು: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನದ ನೀಡದಿದ್ದರಿಂದ ಇತ್ತ ಬೆಂಗಳೂರಿನಲ್ಲಿ ಕಾಂಗ್ರೆಸ್ ನಾಯಕರು ಕೈಯಲ್ಲಿ ಚೊಂಬು ಹಿಡಿದು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನೀಡಿರುವ ಚೊಂಬು ಜಾಹೀರಾತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು.
ಇದೀಗ ಇದೇ ಮಾದರಿಯಲ್ಲಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಬಿಜೆಪಿ ಕೈಯಲ್ಲಿ ಚೊಂಬು ಹಿಡಿದು, ಕಿವಿಯಲ್ಲಿ ಹೂ ಇಟ್ಟುಕೊಂಡು ವಿನೂತನ ಪ್ರಭಟನೆ ನಡೆಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದ ಬಜೆಟ್ ನಲ್ಲಿ ಏನು ಇಲ್ಲ. ಖಾಲಿ ಚೊಂಬು ಎಂದು ವಿಧಾನಸೌಧದ ಪೂರ್ವ ದ್ವಾರದಲ್ಲಿ ಬಿಜೆಪಿ ನಾಯಕರ ಪ್ರತಿಭಟನೆ ನಡೆಸಿದರು.
ಈ ಹಿನ್ನೆಲೆಯಲ್ಲಿ ಈಗ ಬಿಜೆಪಿ ನಾಯಕರು ಅದೇ ಮಾದರಿಯ ಪ್ರತಿಭಟನೆಯನ್ನು ರಾಜ್ಯ ಸರ್ಕಾರದ ವಿರುದ್ಧ ನಡೆಸಿ, ಬಜೆಟ್‌ನಲ್ಲಿ ಜನಪರ ಯೋಜನೆಗಳ ಕೊರತೆ ಇದೆ ಎಂದು ಟೀಕಿಸಿದ್ದಾರೆ.
For More Updates Join our WhatsApp Group :




