ವರ್ಷಕ್ಕೊಮ್ಮೆ ಬಾಗಿಲು ತೆರೆಯುವ `ಹಾಸನಾಂಬ’ ದರ್ಶನಕ್ಕೆ ಮುಹೂರ್ತ ಫಿಕ್ಸ್ | Hasanamba Temple

ಹಾಸನ : ವರ್ಷಕ್ಕೊಮ್ಮೆ ಬಾಗಿಲು ತೆರೆಯುವ ಹಾಸನಾಂಬ ದರ್ಶನ(Hasanamba Temple) ಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅಕ್ಟೋಬರ್ 24 ರಂದು ಹಾಸನಾಂಬ ದೇವಾಲಯದ ಬಾಗಿಲನ್ನು ತೆರೆಯಲಾಗುವುದು .

ಮಂಗಳವಾರ ಪೂರ್ವಭಾವಿ ಸಭೆ ಬಳಿಕ ಮಾತನಾಡಿದ ಶಾಸಕ ಎಚ್. ಪಿ. ಸ್ವರೂಪ್ ಪ್ರಕಾಶ್, ಅ.24 ರಂದು ಸಿಎಂ ಸಿದ್ದರಾಮಯ್ಯ ಹಾಸನಾಂಬಾ ಜಾತ್ರಾ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್, ನಿರ್ಮಲಾನಂದನಾಥ ಸ್ವಾಮೀಜಿ ಈ ವೇಳೆ ಉಪಸ್ಥಿತರಿರಲಿದ್ದಾರೆ.

ಹಾಸನಾಂಬ ದೇವಿಯ ಬಾಗಿಲು 11 ದಿನ ತೆರೆದಿರಲಿದೆ. ಆದರೆ ಮೊದಲ ಹಾಗೂ ಕೊನೆಯ ದಿವಸಗಳಂದು ಭಕ್ತಾದಿಗಳಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ಹೇಳಿದ್ದಾರೆ.

Leave a Reply

Your email address will not be published. Required fields are marked *