ಮೈಸೂರು: ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ಸ್ಟಾರ್ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಮೈಸೂರಿನಲ್ಲಿಂದು ಬಂಧಿಸಲಾಗಿದೆ
ಕಾಮಾಕ್ಷಿಪಾಳ್ಯ ಪೊಲೀಸರಿಂದ ದರ್ಶನ್ ಬಂಧನ, ಅನುಮಾನಸ್ಪದ ಶವ ಪತ್ತವಾದ ನಂತರ ವಿಚಾರಣೆ ಪ್ರಾರಂಭಿಸಿದ ಪೊಲೀಸರು, ವ್ಯಕ್ತಿಯನ್ನು ರೇಣುಕಾ ಸ್ವಾಮಿಎಂದು ಗುರುತಿಸಿದ್ದಾರೆ. ವಿಚಾರಣೆಯ ವೇಳೆ ಆರೋಪಿಗಳ ದರ್ಶನ್ ಹೆಸರು ತಿಳಿಸಿದ ಕಾರಣ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ