ಪೋಕ್ಸೋ ಪ್ರಕರಣದಲ್ಲಿ ಬಂಧನದ ನಂತರ ನ್ಯಾಯಾಲಯದ ಎದುರು ಪ್ರತಿಕ್ರಿಯೆ.
ಬಾಗಲಕೋಟೆ: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ‘ಮ್ಯೂಸಿಕ್ ಮೈಲಾರಿ’ಗೆ ಜಾಮೀನು ಸಿಕ್ಕಿದೆ. 2025ರ ಡಿಸೆಂಬರ್ 17ರಂದು ಜೈಲು ಸೇರಿದ್ದ ಫೆಬ್ರವರಿ 25) ಜಾಮೀನ ಮೇಲೆ ಬಿಡುಗಡೆಯಾಗಿದ್ದಾರೆ. ಜೈಲಿನಿಂದ ಆಚೆ ಬರುತ್ತಿದ್ದಂತೆಯೇ ಟಿವಿ9ಗೆ ಪ್ರತಿಕ್ರಿಯಿಸಿರುವ ಮೈಲಾರಿ, ಡಾ ಅಂಬೇಡ್ಕರ್ ಅವರ ಸಂವಿಧಾನದೊಳಗೆ ನಾವು ಕಾನೂನಾತ್ಮಕವಾಗಿಯೇ ಹೋರಾಟ ಮಾಡುತ್ತಿದ್ದೇವೆ. ಯಾವುದು ಸರಿ ಯಾವುದು ತಪ್ಪು ಎಂದು ನ್ಯಾಯಾಲಯ ತೀರ್ಮಾನ ಮಾಡುತ್ತದೆ. ನ್ಯಾಯಾಲಯದ ತೀರ್ಪಿಗೆ,ಕಾನೂನಿಗೆ ನಾನು ತಲೆ ಬಾಗುತ್ತೇನೆ. ಕೋರ್ಟ್ ತೀರ್ಮಾನಕ್ಕೆ ನಾನು ಬದ್ದವಾಗಿರುತ್ತೇನೆ ಎಂದರು.
ಇನ್ನು ಇದೇ ವೇಳೆ ತಮ್ಮ ಆರ್ಕೆಸ್ಟ್ರಾ ಬಗ್ಗೆ ಮಾತನಾಡಿದ ಮೈಲಾರಿ, ಸದ್ಯಕ್ಕೆ ಏನು ನಿರ್ಧಾರ ಇಲ್ಲ.ಪತ್ನಿಗೆ ಹೆರಿಗೆಯಾಗಿದೆ. ನನ್ನ ತಾಯಿಗೆ ಹುಷಾರಿಲ್ಲ. ಸ್ವಲ್ಪ ಮಾನಸಿಕವಾಗಿ ಬೇಸರವಾಗಿದೆ. ಹೀಗಾಗಿ ಸದ್ಯಕ್ಕೆ ಕಾರ್ಯಕ್ರಮದ ಬಗ್ಗೆ ಯಾವುದೇ ನಿರ್ಧಾರ ಮಾಡುವುದಿಲ್ಲ. ಸ್ವಲ್ಪ ದಿನ ಆದ ಮೇಲೆ ನೋಡೋಣ ಎಂದು ಸ್ಪಷ್ಟಪಡಿಸಿದರು.
For More Updates Join our WhatsApp Group :




