ಕಾಂಗ್ರೆಸ್–ಮುಸ್ಲಿಂ ಸಮುದಾಯ ಶೀತಲ ಸಮರ ಹಿನ್ನೆಲೆ: ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನ ಸಮಾವೇಶ
ದಾವಣಗೆರೆ : ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಸಂಬಂಧ ಕಾಂಗ್ರೆಸ್ ಹಾಗೂ ಮುಸ್ಲಿಂ ಸಮುದಾಯದ ನಡುವೆ ಶೀತಲ ಸಮರ ಶುರುವಾಗಿದ್ದು, ಟಿಕೆಟ್ ನೀಡದಿದ್ದಕ್ಕೆ ಅಲ್ಪಸಂಖ್ಯಾತರು ಕಾಂಗ್ರೆಸ್ ವಿರುದ್ಧ ಬಹಿರಂಗವಾಗಿಯೇ ಸಿಡಿದೆದ್ದಿದ್ದಾರೆ.

ಅಲ್ಲದೇ ಮುಂದಿನ ಚುನಾವಣೆಗಳಲ್ಲಿ ಪಾಠ ಕಲಿಸುವುದಾಗಿಯೂ ಸಹ ಎಚ್ಚರಿಕೆ ನೀಡಿದೆ. ಇದು ಕಾಂಗ್ರೆಸ್ ಪಕ್ಷದಲ್ಲಿ ತಲ್ಲಣಗೊಳಿಸಿದೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಇದೀಗ ಮುಸ್ಲಿಂ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿವೆ. ಇದೇ ಮೇ 16ರಂದು ಬೆಂಗಳೂರಿನ ಟೌನ್‌ಹಾಲ್‌ನಲ್ಲಿ ಮುಸ್ಲಿಂ ಸಮಾವೇಶ ಆಯೋಜಿಸಲಾಗಿದ್ದು, ಇದು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದೆ.
For More Updates Join our WhatsApp Group :
https://chat.whatsapp.com/JVoHqE476Wn3pVh1gWNAcH




