ನಾಗಮಂಗಲ || ಪೊಲೀಸ್ ಹೈ ಅಲರ್ಟ್ : ಈದ್ ಮಿಲಾದ್ ಹಿನ್ನೆಲೆ ಬಿಗಿ ಬಂದೋಬಸ್ತ್

ನಾಗಮಂಗಲ || ಪೊಲೀಸ್ ಹೈ ಅಲರ್ಟ್ : ಈದ್ ಮಿಲಾದ್ ಹಿನ್ನೆಲೆ ಬಿಗಿ ಬಂದೋಬಸ್ತ್

ಮಂಡ್ಯ : ಇತ್ತೀಚಿಗಷ್ಟೆ ಭಾರೀ ಸದ್ದು ಮಾಡಿದ್ದ ನಾಗಮಂಗಲ ಕೋಮುಗಲಭೆ ಬಳಿಕ ಇದೀಗ ಸರ್ಕಾರ ಮತ್ತು ಪೊಲೀಸರು ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಭಾರೀ ಬಿಗಿ ಬಂದೋಬಸ್ತ್ ಮಾಡಿದ್ದಾರೆ

ಸರ್ಕಾರ ಪೊಲೀಸರಿಗೆ ಮತ್ತೆ ಕೋಮು ಘರ್ಷಣೆಗೆ ಅವಕಾಶ ಮಾಡಿಕೊಡದಂತೆ ಸೂಚನೆ ನೀಡಿದ್ದು ಭಾನುವಾರದಿಂದಲೇ ಎಸ್ಪಿ ಮಲ್ಲಿಕಾರ್ಜುನ್ ಬಾಲದಂಡಿ ಅವರು ನಾಗಮಂಗಲದಲ್ಲೇ ಮೊಕ್ಕಾಂ ಹೂಡಿದ್ದಾರೆ.

ಭದ್ರತೆ ಹಾಗೂ ಪರಿಸ್ಥಿತಿ ನಿಯಂತ್ರಣದ ಬಗ್ಗೆ ಗೃಹ ಇಲಾಖೆಗೆ ಗಂಟೆ ಗಂಟೆಗೂ ಮಾಹಿತಿ ನೀಡಲಾಗುತ್ತಿದೆ ಎನ್ನಲಾಗಿದೆ ಮೆರವಣಿಗೆ ಹಿನ್ನೆಲೆ ನಾಗಮಂಗಲದ ಗಲ್ಲಿಗಲ್ಲಿಗಳಲ್ಲೂ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಮೊನ್ನೆ ಗಲಭೆಗೆ ಕಾರಣವಾದ ದರ್ಗಾ, ಮಸೀದಿ ಬಳಿ ಹೆಚ್ಚಿನ ಭದ್ರತೆ ನಿಯೋಜಿಸಲಾಗಿದೆ.

2 SP, 2 ASP, 4 DYSP, 20ಕ್ಕೂ ಹೆಚ್ಚು ಇನ್ಸ್ಪೆಕ್ಟರ್, 20ಕ್ಕೂ ಹೆಚ್ಚು ಪಿಎಸ್ಐ ಭದ್ರತೆಗೆ ನಿಯೋಜಿಸಲಾಗಿದೆ. ಅಲ್ಲದೇ ತಲಾ 7 DIR, KSRP ಸೇರಿದಂತೆ 700ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನ ನಿಯೋಜಿಸಲಾಗಿದೆ. ಈದ್ ಮಿಲಾದ್ ಹಿನ್ನೆಲೆಯಲ್ಲಿ ಮುಸ್ಲಿಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಿದ್ದಾರೆ.

Leave a Reply

Your email address will not be published. Required fields are marked *