ಬೆಂಗಳೂರು: ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ನಟ ಶಂಕರ್ ನಾಗ್ ಹಾಗೂ ಇತ್ತೀಚೆಗೆ ನಿಧನರಾದ ನಟಿ, ನಿರೂಪಕಿ ಅಪರ್ಣಾ ಹೆಸರು ನಾಮಕರಣ ಮಾಡುವಂತೆ ಸರ್ಕಾರಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒತ್ತಾಯಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ”ಕನ್ನಡ ಚಿತ್ರರಂಗದ ಮೇರು ನಟ ಶಂಕರ್ ನಾಗ್ ಹಾಗೂ ಕನ್ನಡಿಗರ ಮನದಲ್ಲಿ ಅಚ್ಚಳಿಯದೆ ಉಳಿದಿರುವ ಅಪರ್ಣಾ ಅವರ ಕೊಡುಗೆ ಕರ್ನಾಟಕಕ್ಕೆ ಹಾಗೂ ಕನ್ನಡಕ್ಕೆ ಅಪಾರವಾದುದು.
ಶಂಕರ್ ನಾಗ್ ಹಾಗೂ ಅಪರ್ಣಾ ಅವರ ಹೆಸರುಗಳನ್ನು ಬೆಂಗಳೂರು ಮೆಟ್ರೋ ನಿಲ್ದಾಣಗಳಿಗೆ ಸರ್ಕಾರ ನಾಮಕರಣ ಮಾಡಲಿ” ಎಂದು ಒತ್ತಾಯಿಸಿದ್ದಾರೆ.