Namma Metro || ಸಿಗ್ನಲಿಂಗ್ ಕಾರ್ಯ : ಹಸಿರು ಮಾರ್ಗದ ಮೆಟ್ರೋ ಸೇವೆಯಲ್ಲಿ ವ್ಯತ್ಯಯ

ನಾಗಸಂದ್ರ-ಮಾದಾವರ ನಮ್ಮ ಮೆಟ್ರೋ ಆರಂಭ: ಮೊದಲ ದಿನವೇ ಆರು ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ

ಬೆಂಗಳೂರು: ವಿಸ್ತರಿಸಿದ ಹಸಿರು ಮಾರ್ಗದ (Greenline Metro) ನಾಗಸಂದ್ರದಿಂದ ಮಾದವರ ನಡುವೆ ಸಿಗ್ನಲಿಂಗ್ ಸಂಬಂಧಿತ ಪರೀಕ್ಷೆ ಮುಂದುವರಿಸುವ ಸಲುವಾಗಿ ಕೆಲವು ದಿನಗಳಂದು ರೈಲು ಸೇವೆಯ ಸಮಯ ಮತ್ತು ಕಾರ್ಯಾಚರಣೆಗಳಲ್ಲಿ ಬದಲಾವಣೆಯಾಗಲಿದೆ ಎಂದು ಬಿಎಂಆರ್‌ಸಿಎಲ್ (BMRCL) ತಿಳಿಸಿದೆ.

ಆ.20, ಆ.23 ಮತ್ತು ಆ.30 ಹಾಗೂ ಸೆ.6 ಮತ್ತು ಸೆ.11ರಂದು  ಪೀಣ್ಯ ಕೈಗಾರಿಕಾ ಪ್ರದೇಶ (Peenya Industry) ಮತ್ತು ನಾಗಸಂದ್ರ (Nagasandra) ಮೆಟ್ರೋ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಪೂರ್ಣ ದಿನ ಸ್ಥಗಿತಗೊಳಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ:

ನಾಗಸಂದ್ರ ಮೆಟ್ರೋ ನಿಲ್ದಾಣದಿಂದ ಪೀಣ್ಯ ಇಂಡಸ್ಟ್ರಿ ಕಡೆಗೆ ಆ.24ರಂದು ಕೊನೆಯ ರೈಲು ಸೇವೆಯು ರಾತ್ರಿ 11:05ರ ಬದಲಾಗಿ 10:00 ಗಂಟೆಗೆ ಪ್ರಾರಂಭವಾಗಲಿದೆ. ಆ.25ರಂದು ಮೊದಲ ರೈಲು ಸೇವೆಯು ಬೆಳಗ್ಗೆ 5:00 ಗಂಟೆಯ ಬದಲಾಗಿ 06:00 ಗಂಟೆಗೆ ಪ್ರಾರಂಭವಾಗಲಿದೆ.

ಪೀಣ್ಯ ಇಂಡಸ್ಟ್ರಿಯಿಂದ ರೇಷ್ಮೆ ಸಂಸ್ಥೆ ಮೆಟ್ರೋ ನಿಲ್ದಾಣದ ಕಡೆಗೆ:

ಆ.24ರಂದು ಕೊನೆಯ ರೈಲು ರಾತ್ರಿ 11:12ಕ್ಕೆ ಸಂಚರಿಸಲಿದೆ. ಆ.25 ರಂದು ಮೊದಲ ರೈಲು ಸೇವೆಯು ಬೆಳಗ್ಗೆ 05:00ಕ್ಕೆ ಪ್ರಾರಂಭವಾಗಲಿದೆ. ನೇರಳೆ ಮಾರ್ಗದ ಮೆಟ್ರೋ ಸೇವೆಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಎಂದು ನಮ್ಮ ಮೆಟ್ರೋ ತಿಳಿಸಿದೆ

Leave a Reply

Your email address will not be published. Required fields are marked *