NEET ಮರುಪರೀಕ್ಷೆ : 50% ಆಕಾಂಕ್ಷಿಗಳು ಗೈರು

ನವದೆಹಲಿ: ನೀಟ್-ಯುಜಿ ಮರುಪರೀಕ್ಷೆಗೆ ಗ್ರೇಸ್ ಮಾರ್ಕ್ಸ್ ಪಡೆದ ಶೇ. 50ರಷ್ಟು ವಿದ್ಯಾರ್ಥಿಗಳು ಗೈರಾಗಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ.

ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನಾಲ್ಕು ರಾಜ್ಯ ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ಆರು ಪರೀಕ್ಷಾ ಕೇಂದ್ರಗಳಲ್ಲಿ ಭಾನುವಾರ ಆಯೋಜಿಸಿದ್ದ ನೀಟ್-ಯುಜಿ ಮರು ಪರೀಕ್ಷೆಗೆ ಹಾಜರಾಗಬೇಕಿದ್ದ 1,563 ವಿದ್ಯಾರ್ಥಿಗಳ ಪೈಕಿ ಕೇವಲ 813 ವಿದ್ಯಾರ್ಥಿಗಳು ಮಾತ್ರ ಹಾಜರಾಗಿರುವುದು ಬೆಳಕಿಗೆ ಬಂದಿದೆ.

ಇನ್ನುಳಿದ 750 ಮಂದಿ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ ಎಂದು ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ಮಾಹಿತಿ ನೀಡಿದೆ. ಛತ್ತೀಸ್ ಗಢದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಮರು ಪರೀಕ್ಷೆ ಆಯೋಜನೆಗೊಂಡಿತ್ತು. ಈ ಮರುಪರೀಕ್ಷೆಗೆ ಅರ್ಹತೆ ಪಡೆದಿದ್ದ 602 ವಿದ್ಯಾರ್ಥಿಗಳ ಪೈಕಿ ಕೇವಲ 291 ಪರೀಕ್ಷಾರ್ಥಿಗಳು ಮಾತ್ರ ಇಂದಿನ ಮರುಪರೀಕ್ಷೆಗೆ ಹಾಜರಾಗಿದ್ದರು.

ಚಂಡೀಗಢದ ಎರಡು ಪರೀಕ್ಷಾ ಕೇಂದ್ರಗಳಲ್ಲಿ ಆಯೋಜಿಸಲಾಗಿದ್ದ ಮರು ಪರೀಕ್ಷೆಗೆ ಅರ್ಹತೆ ಪಡೆದಿದ್ದ 494 ವಿದ್ಯಾರ್ಥಿಗಳ ಪೈಕಿ ಕೇವಲ 287 ಪರೀಕ್ಷಾರ್ಥಿಗಳು ಮರು ಪರೀಕ್ಷೆಗೆ ಹಾಜರಾಗಿದ್ದರು. ಮೇಘಾಲಯದಲ್ಲಿ 464 ಅರ್ಹ ವಿದ್ಯಾರ್ಥಿಗಳ ಪೈಕಿ ಕೇವಲ 234 ಪರೀಕ್ಷಾರ್ಥಿಗಳು ಇಂದಿನ ಪರೀಕ್ಷೆಗೆ ಹಾಜರಾಗಿದ್ದರು.

ಗುಜರಾತ್ ನಲ್ಲಿ ಓರ್ವ ಪರೀಕ್ಷಾರ್ಥಿಗೆ ಮರು ಪರೀಕ್ಷೆಯನ್ನು ಆಯೋಜಿಸಲಾಗಿತ್ತು.ಜೂನ್ 30ರಂದು ಈ ಮರು ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ

Leave a Reply

Your email address will not be published. Required fields are marked *