NEET-UG ಅಕ್ರಮ: CBI ಹೆಗಲಿಗೆ ತನಿಖಾ ಜವಾಬ್ದಾರಿ ಹೊರಿಸಿದ ಕೇಂದ್ರ ಸರ್ಕಾರ

ನವದೆಹಲಿ: ಮಹತ್ವದ ಬೆಳವಣಿಗೆಯಲ್ಲಿ ಪದವಿಪೂರ್ವ ವೈದ್ಯಕೀಯ ಕೋರ್ಸ್​ಗಳ ಪ್ರವೇಶಕ್ಕಾಗಿ ನಡೆಸಲಾಗುವ ಸ್ಪರ್ಧಾತ್ಮಕ ನೀಟ್ ಪರೀಕ್ಷೆಯಲ್ಲಿ (NEET UG) ನಡೆದಿರುವ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪದ ತನಿಖೆ ಹೊಣೆಯನ್ನು ಕೇಂದ್ರ ಸರ್ಕಾರ CBI ಒಪ್ಪಿಸಿ ಶನಿವಾರ ಆದೇಶಿಸಿದೆ

ನೀಟ್ ಪರೀಕ್ಷೆಗೆ ಸಂಬಂಧಿಸಿದಂತೆ “ಕೆಲವು ಅಕ್ರಮಗಳು, ವಂಚನೆ ಮತ್ತು ದುಷ್ಕೃತ್ಯಗಳ ಪ್ರಕರಣಗಳು ವರದಿಯಾಗಿವೆ. ಪರೀಕ್ಷಾ ಪ್ರಕ್ರಿಯೆಯ ನಿರ್ವಹಣೆಯಲ್ಲಿ ಪಾರದರ್ಶಕತೆಗಾಗಿ, ಶಿಕ್ಷಣ ಸಚಿವಾಲಯದ ಪರಿಶೀಲನೆಯ ನಂತರ ಈ ಬಗ್ಗೆ ಸಮಗ್ರ ತನಿಖೆಗಾಗಿ ಸಿಬಿಐಗೆ ವಹಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವಾಲಯ ಬಿಡುಗಡೆ ಮಾಡಿರುವ ತನ್ನ ಹೇಳಿಕೆಯಲ್ಲಿ ತಿಳಿಸಿದೆ

ಪರೀಕ್ಷೆಗಳ ಪಾವಿತ್ರ್ಯವನ್ನು ಖಚಿತಪಡಿಸಿಕೊಳ್ಳಲು ಮತ್ತು ವಿದ್ಯಾರ್ಥಿಗಳ ಹಿತಾಸಕ್ತಿಯನ್ನು ರಕ್ಷಿಸಲು ಸರ್ಕಾರ ಬದ್ಧ. ಮೋಸದಲ್ಲಿ ಭಾಗಿಯಾಗಿರುವ ಯಾವುದೇ ವ್ಯಕ್ತಿ, ಸಂಸ್ಥೆ ಕಠಿಣ ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ಎಂದು ಸಚಿವಾಲಯ ಹೇಳಿದೆ

ಕಳೆದ ಮೇ 5 ರಂದು ದೇಶದ 4,750 ಕೇಂದ್ರಗಳಲ್ಲಿ ನೀಟ್-ಯುಜಿ ನಡೆದಿದ್ದು, ಸುಮಾರು 24 ಲಕ್ಷ ಅಭ್ಯರ್ಥಿಗಳು ಭಾಗವಹಿಸಿದ್ದರು. ನಿರೀಕ್ಷಿತ ದಿನಾಂಕಕ್ಕಿಂತ ಹತ್ತು ದಿನ ಮುಂಚಿತವಾಗಿ ಜೂನ್ 4 ರಂದು ಫಲಿತಾಂಶಗಳನ್ನು ಘೋಷಿಸಲಾಗಿತ್ತು. ಫಲಿತಾಂಶದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ದುಷ್ಕೃತ್ಯಗಳ ಆರೋಪಗಳು ಕೇಳಿಬಂದಿದ್ದವು.

Leave a Reply

Your email address will not be published. Required fields are marked *