ನೆಲಮಂಗಲ||  ಹೊತ್ತಿ ಉರಿದ ಗೋದಾಮು – 30 ಕೋಟಿ ಮೌಲ್ಯದ ಆಯಿಲ್‌ ಬೆ*ಕಿಗಾಹುತಿ

ನೆಲಮಂಗಲ|| ಹೊತ್ತಿ ಉರಿದ ಗೋದಾಮು – 30 ಕೋಟಿ ಮೌಲ್ಯದ ಆಯಿಲ್ ಬೆ*ಕಿಗಾಹುತಿ

ನೆಲಮಂಗಲ: ಶಾರ್ಟ್‌ ಸರ್ಕ್ಯೂಟ್‌ನಿಂದ ಆಯಿಲ್‌ ಗೋದಾಮು ಬೆಂಕಿಗಾಹುತಿಯಾಗಿರುವ ಘಟನೆ ನೆಲಮಂಗಲ ಬಳಿಯ ಅಡಕಮಾರನಹಳ್ಳಿ ಬಳಿ ಘಟನೆ ನಡೆದಿದೆ.

ಶೆಲ್‌ ಕಂಪನಿಗೆ ಸೇರಿದ ಆಯಿಲ್‌ ಗೋದಾಮು ಧಗಧಗನೆ ಹೊತ್ತಿ ಉರಿದಿದೆ. ಬೆಳಗಿನ ಜಾವ ಮೂರು ಗಂಟೆಯಲ್ಲಿ ಈ ಅವಘಡ ಸಂಭವಿಸಿದೆ. ನೆಲಮಂಗಲ, ಪೀಣ್ಯಾ, ಯಶವಂತಪುರ ಭಾಗದ 8 ಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕಾರ್ಯ ನಡೆದಿದೆ.

ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೆಂಕಿಯ ನರ್ತನ ಕ್ಷಣಕ್ಷಣಕ್ಕೂ ಹೆಚ್ಚಾಗುತ್ತಿದೆ. ಅಕ್ಕದ ಗೋದಾಮು ಮನೆಗೆ ಬೆಂಕಿ ತಗುಲುವ ಆತಂಕ ಎದುರಾಗಿದೆ. ಸರಿಸುಮಾರು 30 ಕೋಟಿ ರೂಪಾಯಿ ಮೌಲ್ಯದ ಆಯಿಲ್ ಬೆಂಕಿಗಾಹುತಿ ಆಗಿರಬಹುದು ಎನ್ನಲಾಗಿದೆ. 40 ಸಾವಿರ ಅಡಿಯಲ್ಲಿನ ಗೋದಾಮು ಸಂಪೂರ್ಣವಾಗಿ ಬೆಂಕಿಯಿಂದ ನಾಶವಾಗಿದೆ.

ಭಾರತ-ಪಾಕಿಸ್ತಾನ ನಡುವಿನ ಯುದ್ಧ ಆರಂಭ ಹಿನ್ನೆಲೆ ಹೆಚ್ಚಿನ ಸ್ಟಾಕ್ ಶೇಖರಣೆ ಮಾಡಲಾಗಿತ್ತು. ಯುದ್ಧದ ಪರಿಣಾಮವಾಗಿ ಕಂಪನಿ ಸಾಕಷ್ಟು ಪ್ರಮಾಣದಲ್ಲಿ ಆಯಿಲ್ ಶೇಖರಣೆ ಮಾಡಿತ್ತು. ರಾಜ್ಯದಲ್ಲಿ ಯಾವುದೇ ಆಯಿಲ್ ಸಮಸ್ಯೆ ಬಾರದಂತೆ ಸಂಗ್ರಹಣೆ ಮಾಡಲಾಗಿತ್ತು. ಆದರೆ, ಬೆಂಕಿ ಅವಘಡದಿಂದ ಆಯಿಲ್‌ ನಷ್ಟವಾಗಿದೆ.

ಕಂದಾಯ ಮಾಜಿ ಸಚಿವ ಹೆಚ್.ಸಿ.ಶ್ರೀಕಂಠಯ್ಯ ಅಳಿಯ ಕೃಷ್ಣಪ್ಪ ಎಂಬವರಿಗೆ ಸೇರಿದ ಗೋದಾಮು ಇದು. ಇದನ್ನು ಶೆಲ್ ಕಂಪನಿಗೆ ಬಾಡಿಗೆಗೆ ನೀಡಲಾಗಿತ್ತು

Leave a Reply

Your email address will not be published. Required fields are marked *