ನವದೆಹಲಿ : ಜನ ಗಣತಿಯ ಜೊತೆಗೆ ಜಾತಿ ಗಣತಿಯನ್ನೂ ನಡೆಸುವುದಾಗಿ ಕೇಂದ್ರ ಸರ್ಕಾರ ಈಗಾಗಲೇ ತಿಳಿಸಿದೆ. ಗಣತಿ ನಡೆಸುವ ದಿನಾಂಕವನ್ನು ಇಂದು (ಬುಧವಾರ) ಪ್ರಕಟಿಸಿತು. ದೇಶದಲ್ಲಿ ಎರಡು ಹಂತದಲ್ಲಿ ಗಣತಿ ನಡೆಯಲಿದೆ ಎಂದು ಕೇಂದ್ರ ಹೇಳಿದೆ.

ಈ ಬಗ್ಗೆ ಅಧಿಕೃತ ಪ್ರಕಟಣೆ ಹೊರಡಿಸಿರುವ ಗೃಹ ಸಚಿವಾಲಯ, ಹವಾಮಾನ ಮತ್ತು ಪ್ರದೇಶಗಳಿಗೆ ಅನುಗುಣವಾಗಿ ಗಣತಿ ನಡೆಯಲಿದೆ. ಲಡಾಖ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದಲ್ಲಿ ಅಕ್ಟೋಬರ್ 1, 2026 ರಿಂದ ಮತ್ತು ದೇಶದ ಉಳಿದ ಭಾಗಗಳಲ್ಲಿ ಮಾರ್ಚ್ 1, 2027 ರಿಂದ ಜನ ಗಣತಿಯೊಂದಿಗೆ ಜಾತಿ ಗಣತಿಯೂ ನಡೆಯಲಿದೆ ಎಂದು ತಿಳಿಸಿದೆ.
1948ರ ಜನಗಣತಿ ಕಾಯ್ದೆಯ ಪ್ರಕಾರ ದೇಶದಲ್ಲಿ 10 ವರ್ಷಗಳಿಗೊಮ್ಮೆ ಗಣತಿ ನಡೆಯಲಿದೆ. ಅದರ ಅನುಸಾರವೇ ಈ ಬಾರಿ ಗಣತಿ ಆಗಲಿದೆ. ಅಧಿಸೂಚನೆಯನ್ನು ಜೂನ್ 16 ರಂದು ಅಧಿಕೃತ ಗೆಜೆಟ್ನಲ್ಲಿ ಪ್ರಕಟಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.