ನವದೆಹಲಿ: ವಿಧಾನ ಪರಿಷತ್‌ನ ನಾಲ್ಕು ಸ್ಥಾನಗಳಿಗೆ ನಾಮನಿರ್ದೇಶನ ಮಾಡುವ ಸಂದರ್ಭದಲ್ಲಿ ಒಕ್ಕಲಿಗ, ಇತರ ಹಿಂದುಳಿದ ವರ್ಗಗಳು (ಒಬಿಸಿ) ಹಾಗೂ ದಲಿತ ಸಮುದಾಯಕ್ಕೆ ಪ್ರಾತಿನಿಧ್ಯ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ವ್ಯಕ್ತಪಡಿಸಿದ್ದಾರೆ.

ನಾಮನಿರ್ದೇಶನ ಪ್ರಕ್ರಿಯೆ ಅಂತಿಮಗೊಳಿಸುವ ಸಂಬAಧ ಸಿದ್ದರಾಮಯ್ಯ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಶುಕ್ರವಾರ ಇಲ್ಲಿ ಭೇಟಿ ಮಾಡಿ ಸಮಾಲೋಚಿಸಿದರು. ಸಿದ್ದರಾಮಯ್ಯ ಅವರು ಸಂಭಾವ್ಯರ ಪಟ್ಟಿಯನ್ನು ಪಟ್ಟಿಯನ್ನು ಖರ್ಗೆ ಅವರಿಗೆ ನೀಡಿದ್ದಾರೆ. ‘ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಸಹಮತಕ್ಕೆ ಬಂದು ಸಂಭಾವ್ಯರ ಪಟ್ಟಿಯನ್ನು ಹೈಕಮಾಂಡ್‌ಗೆ ಕಳುಹಿಸಿ’ ಎಂದು ಖರ್ಗೆ ಸೂಚಿಸಿದ್ದಾರೆ. ಪಕ್ಷಕ್ಕಾಗಿ ಹಲವು ವರ್ಷಗಳಿಂದ ಎಲೆಮರೆ ಕಾಯಿಯಂತೆ ದುಡಿಯುತ್ತಿರುವ ಸಣ್ಣ ಸಮುದಾಯಗಳ ನಾಯಕರಿಗೆ ಅವಕಾಶ ನೀಡುವ ಬಗ್ಗೆಯೂ ಪರಿಶೀಲನೆ ನಡೆಸಿ ಎಂದು ಖರ್ಗೆ ಸಲಹೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಒಕ್ಕಲಿಗ ಸಮುದಾಯದಿಂದ ಹಿರಿಯ ನಾಯಕ ಬಿ.ಎಲ್.ಶಂಕರ್, ಶಿವಕುಮಾರ್ ಆಪ್ತರಾದ ರಘುನಂದನ್ ರಾಮಣ್ಣ, ವಿನಯ್ ಕಾರ್ತಿಕ್ ಹೆಸರು ಮುಂಚೂಣಿಗೆ ಬಂದಿವೆ. ಪರಿಷತ್‌ನಲ್ಲಿ ಕಾಂಗ್ರೆಸ್ ಈಗ ೩೩ ಸದಸ್ಯರನ್ನು ಹೊಂದಿದೆ. ನಾಲ್ಕು ಸದಸ್ಯರ ನಾಮನಿರ್ದೇಶನದ ಬಳಿಕ ಪಕ್ಷದ ಬಲ ೩೭ಕ್ಕೆ ಏರಲಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮರು ಮತಎಣಿಕೆ ಬಳಿಕ ಗಾಯತ್ರಿ ಶಾಂತೇಗೌಡ ಗೆಲುವು ಸಾಧಿಸಬಹುದು ಎಂಬ ವಿಶ್ವಾಸದಲ್ಲಿ ಕೈ ಪಾಳಯ ಇದೆ. ಆಗ ಪರಿಷತ್‌ನಲ್ಲಿ ಕಾಂಗ್ರೆಸ್‌ಗೆ ಬಹುಮತ ಲಭ್ಯವಾಗಲಿದೆ. ಬಿ.ಎಲ್.ಶಂಕರ್ ಅವರನ್ನು ನಾಮನಿರ್ದೇಶನ ಮಾಡಿ ಪರಿಷತ್ ಸಭಾಪತಿಯನ್ನಾಗಿ ಮಾಡುವ ಇರಾದೆ ಸಿದ್ದರಾಮಯ್ಯ ಅವರಿಗೆ ಇದೆ. ಆದರೆ, ಒಕ್ಕಲಿಗ ಸಮುದಾಯದ ಕೋಟಾವನ್ನು ಬಿಟ್ಟುಕೊಡಲು ಡಿ.ಕೆ.ಶಿವಕುಮಾರ್ ಸಿದ್ಧರಿಲ್ಲ.
ಚನ್ನಪಟ್ಟಣ ಉಪಚುನಾವಣೆಗೆ ರಘುನಂದನ್ ರಾಮಣ್ಣ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿಯಿಂದ ವಲಸೆ ಬಂದ ಸಿ.ಪಿ.ಯೋಗೇಶ್ವರ ಅವರಿಗೆ ಪಕ್ಷ ಟಿಕೆಟ್ ನೀಡಿತ್ತು, ಆಗ ರಘುನಂದನ್ ಮುನಿಸಿಕೊಂಡಿದ್ದರು. ಪರಿಷತ್ ಸದಸ್ಯರನ್ನಾಗಿ ಮಾಡಲಾಗುವುದು ಎಂದು ಶಿವಕುಮಾರ್ ಭರವಸೆ ನೀಡಿದ್ದರು. ಪರಿಷತ್‌ಗೆ ನಾಮನಿರ್ದೇಶನ ಮಾಡಬೇಕು ಎಂದು ರಘುನಂದನ್ ಪಟ್ಟು ಹಿಡಿದಿದ್ದಾರೆ.
ಒಬಿಸಿ ಸಮುದಾಯದಿಂದ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಅವರಿಗೆ ಅವಕಾಶ ನೀಡುವ ಬಗ್ಗೆ ಚರ್ಚೆಯಾಗಿದೆ. ಪತ್ರಕರ್ತ ದಿನೇಶ್ ಅಮಿನ್‌ಟ್ಟು ಅವರ ಹೆಸರು ಪ್ರಸ್ತಾಪವಾಗಿದೆ. ಪರಿಷತ್‌ನಲ್ಲಿ ಕಾಂಗ್ರೆಸ್‌ನ ಈಡಿಗ ಸಮುದಾಯದ ಪ್ರತಿನಿಧಿಗಳಿದ್ದಾರೆ. ಮತ್ತೆ ಈಡಿಗ ಸಮುದಾಯಕ್ಕೆ ಪ್ರಾತಿನಿಧ್ಯ ನೀಡುವ ಬಗ್ಗೆ ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗಿದೆ. ದಲಿತ ಸಮುದಾಯದಿಂದ ಡಿ.ಜಿ.ಸಾಗರ್ ಅಥವಾ ಪತ್ರಕರ್ತ ಶಿವಕುಮಾರ್ ಅವರನ್ನು ಪರಿಗಣಿಸಬೇಕು ಎಂದು ಸಿದ್ದರಾಮಯ್ಯ ಅವರು ಹೈಕಮಾಂಡ್ ನಾಯಕರ ಗಮನಕ್ಕೆ ತಂದಿದ್ದಾರೆ.
ಪರಿಷತ್ ಸದಸ್ಯರಾಗಿದ್ದ ಪ್ರಕಾಶ್ ರಾಠೋಡ್ ಹಾಗೂ ಯು.ಬಿ.ವೆಂಕಟೇಶ್ ಅವರಿಗೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಕಡಿಮೆ. ವೆಂಕಟೇಶ್ ಅವರು ಬಸವನಗುಡಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು. ಜತೆಗೆ, ಅವರನ್ನು ಎಐಸಿಸಿ ಕಾರ್ಯದರ್ಶಿಯನ್ನಾಗಿ ಮಾಡಲಾಗಿದೆ. ಈ ಹಿಂದೆ ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್ ಅವರನ್ನು ಪರಿಷತ್ ಸದಸ್ಯರನ್ನಾಗಿ ಮಾಡಲು ಸಿದ್ದರಾಮಯ್ಯ ಒಲವು ತೋರಿದ್ದರು. ವಿಧಾನಸಭಾ ಚುನಾವಣೆಯಲ್ಲಿ ಸೋತವರಿಗೆ ಆದ್ಯತೆ ನೀಡುವುದು ಬೇಡ ಎಂದು ಶಿವಕುಮಾರ್ ವಾದಿಸಿತ್ತು. ಅದೇ ಸೂತ್ರವನ್ನು ವೆಂಕಟೇಶ್ ಅವರಿಗೂ ಅನ್ವಯಿಸಬೇಕು ಎಂಬ ಚರ್ಚೆಯೂ ಕಾಂಗ್ರೆಸ್ ಪಾಳಯದಲ್ಲಿ ನಡೆದಿದೆ.