ನವದೆಹಲಿ; ಪಹಲ್ಗಾಮ್ ಉಗ್ರ ದಾಳಿಯ ಹಿನ್ನೆಲೆಯಲ್ಲಿ ಭಾರತ ಸರ್ಕಾರ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಪಾಕಿಸ್ತಾನಿ ನಾಗರಿಕರಿಗೆ ಈಗಾಗಲೇ ನೀಡಲಾದ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣವೇ ಸ್ಥಗಿತಗೊಳಿಸಲಾಗಿದೆ. ಭಾರತ ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ಸರ್ಕಾರ ಸ್ಥಗಿತಗೊಳಿಸಿದೆ. ಏಪ್ರಿಲ್ 27 ರೊಳಗೆ ಭಾರತವನ್ನು ತೊರೆಯುವಂತೆ ಸೂಚಿಸಿದೆ. ನಿನ್ನೆ ನಡೆದ ಭದ್ರತಾ ಸಂಪುಟ ಸಮಿತಿಯ ನಿರ್ಣಯದ ನಂತರ, ಭಾರತ ಸರ್ಕಾರವು ಪಾಕಿಸ್ತಾನಿ ಪ್ರಜೆಗಳಿಗೆ ಎಲ್ಲಾ ವೀಸಾ ಸೇವೆಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ನಿರ್ಧರಿಸಿದೆ. ಈ ನಿರ್ಧಾರದ ಭಾಗವಾಗಿ, ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ಎಲ್ಲಾ ಭಾರತೀಯ ವೀಸಾಗಳನ್ನು ಏಪ್ರಿಲ್ ೨೭ ರಿಂದ ರದ್ದುಗೊಳಿಸಲಾಗುವುದು.

ಪಾಕಿಸ್ತಾನಿ ನಾಗರಿಕರಿಗೆ ನೀಡಲಾದ ವೈದ್ಯಕೀಯ ವೀಸಾಗಳು ಕೇವಲ ಏಪ್ರಿಲ್ ೨೯ರವರೆಗೆ ಮಾತ್ರ ಮಾನ್ಯವಾಗಿರಲಿದೆ. ಭಾರತದಲ್ಲಿರುವ ಎಲ್ಲಾ ಪಾಕಿಸ್ತಾನಿ ನಾಗರಿಕರು ತಮ್ಮ ವೀಸಾದ ಮಾನ್ಯತೆಯ ಅವಧಿ ಮುಗಿಯುವ ಮೊದಲು ದೇಶವನ್ನು ತೊರೆಯಬೇಕು.ಹಾಗೇ, ಭಾರತೀಯ ನಾಗರಿಕರಿಗೆ ಪಾಕಿಸ್ತಾನಕ್ಕೆ ಪ್ರಯಾಣಿಸದಂತೆ ಸಲಹೆ ನೀಡಲಾಗಿದೆ. ಪಾಕಿಸ್ತಾನದಲ್ಲಿರುವ ಭಾರತೀಯ ನಾಗರಿಕರು ಆದಷ್ಟು ಬೇಗ ಭಾರತಕ್ಕೆ ಮರಳಲು ಸೂಚನೆ ನೀಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಜನರ ಜೀವವನ್ನು ಬಲಿ ಪಡೆದ ಭಯೋತ್ಪಾದಕ ದಾಳಿಯ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಭಾರತೀಯ ಪ್ರಜೆಗಳು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸೂಚಿಸಲಾಗಿದೆ. ಪ್ರಸ್ತುತ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪಾಕಿಸ್ತಾನಕ್ಕೆ ಪ್ರಯಾಣಿಸುವುದನ್ನು ತಪ್ಪಿಸುವಂತೆ ಸಚಿವಾಲಯವು ಭಾರತೀಯ ಪ್ರಜೆಗಳನ್ನು ಒತ್ತಾಯಿಸಿದೆ.