New Delhi: ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ನೀಡಿದ ಪ್ರಧಾನಿ ಮೋದಿ..!!

ನವದೆಹಲಿ: ಉದ್ಯೋಗ ಮೇಳದ ಅಡಿ ಸರ್ಕಾರಿ ಇಲಾಖೆಗಳು ಮತ್ತು ಸಂಸ್ಥೆಗಳಲ್ಲಿ ಹೊಸದಾಗಿ ನೇಮಕಗೊಂಡ 51 ಸಾವಿರಕ್ಕೂ ಹೆಚ್ಚು ಉದ್ಯೋಗಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಿದರು.

ಮೋದಿ

ಇದೇ ಸಂದರ್ಭದಲ್ಲಿ ಪ್ರಧಾನಿಯವರು ನೇಮಕಾತಿ ಪತ್ರ ಪಡೆದ ಯುವಕರನ್ನು ಉದ್ದೇಶಿಸಿ ಮಾತನಾಡಿದರು. ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಪ್ರಧಾನ ಮಂತ್ರಿ ಅವರ ಬದ್ಧತೆ ಈಡೇರಿಸುವ ನಿಟ್ಟಿನಲ್ಲಿ ಉದ್ಯೋಗ ಮೇಳವು ಒಂದು ಹೆಜ್ಜೆಯಾಗಿದೆ.

ಬೆಳಗ್ಗೆ 10:30ಕ್ಕೆ ಪ್ರಧಾನಮಂತ್ರಿಗಳ ವಿಡಿಯೋ ಕಾನ್ಫರೆನ್ಸ್ ಮೂಲಕ ನೇಮಕಾತಿ ಪತ್ರಗಳನ್ನು ವಿತರಿಸಿದರು. ಯುವಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ವಿವಿಧ ಪಡೆಗಳಲ್ಲಿ ಸೇವೆ ಸಲ್ಲಿಸಲು ಹೊಸದಾಗಿ ಸೇರ್ಪಡೆಗೊಂಡ ಸಿಬ್ಬಂದಿಗೆ ಅಭಿನಂದನೆಗಳು. ದೇಶವೇ ಹೆಮ್ಮೆ, ಆತ್ಮವಿಶ್ವಾಸ ತುಂಬಿರುವ ಇಂತಹ ವಾತಾವರಣದಲ್ಲಿ ಈ ಬಾರಿ ಉದ್ಯೋಗ ಮೇಳ ಆಯೋಜಿಸಲಾಗುತ್ತಿದೆ ಎಂದರು.

ಕಳೆದ ಕೆಲವು ವರ್ಷಗಳಲ್ಲಿ ಅರೆಸೇನಾ ಪಡೆಗಳ ನೇಮಕಾತಿ ಪ್ರಕ್ರಿಯೆಯಲ್ಲಿ ನಾವು ಅನೇಕ ಪ್ರಮುಖ ಬದಲಾವಣೆಗಳನ್ನು ಮಾಡಿದ್ದೇವೆ. ಯಾವುದೇ ಆರ್ಥಿಕತೆ ಮುಂದುವರಿಯಬೇಕಾದರೆ ದೇಶದ ಪ್ರತಿಯೊಂದು ಕ್ಷೇತ್ರವೂ ಅಭಿವೃದ್ಧಿ ಹೊಂದುವುದು ಅವಶ್ಯಕ.

ಕಳೆದ 9 ವರ್ಷಗಳ ನಮ್ಮ ಪ್ರಯತ್ನದಿಂದ, ಬದಲಾವಣೆಯ ಮತ್ತೊಂದು ಹೊಸ ಹಂತವು ಕಾಣಿಸಿಕೊಳ್ಳಲು ಪ್ರಾರಂಭಿಸಿದೆ. ಪ್ರಧಾನ ಮಂತ್ರಿ ಜನ್ ಧನ್ ಯೋಜನೆಯು ಹಳ್ಳಿ ಮತ್ತು ಬಡವರ ಆರ್ಥಿಕ ಸಬಲೀಕರಣದಲ್ಲಿ ಮತ್ತು ಉದ್ಯೋಗ ಸೃಷ್ಟಿಯಲ್ಲಿ ದೊಡ್ಡ ಪಾತ್ರವನ್ನು ವಹಿಸಿದೆ ಎಂದರು.

Facebook: https://www.facebook.com/PragathiTV/

Pragati TV Social Connect for more latest u

Leave a Reply

Your email address will not be published. Required fields are marked *