ನವದೆಹಲಿ: ಬಿಜೆಪಿ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ಇಂದು(ಶನಿವಾರ) ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.
ಹಿರಿಯ ಬಿಜೆಪಿ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ನವದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ ಮತ್ತು ಅವರನ್ನು ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ಆಸ್ಪತ್ರೆ ಅಧಿಕಾರಿಗಳು ಖಚಿತಪಡಿಸಿದ್ದಾರೆ.
96 ವರ್ಷ ವಯಸ್ಸಿನವರು ನರವಿಜ್ಞಾನ ವಿಭಾಗದ ಹಿರಿಯ ಸಲಹೆಗಾರ ಡಾ ವಿನಿತ್ ಸೂರಿ ಅವರ ಆರೈಕೆಯಲ್ಲಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ತಿಳಿಸಿದೆ. ಎರಡು ದಿನಗಳ ಹಿಂದೆ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ಅವರನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಕಳೆದ ಕೆಲವು ತಿಂಗಳುಗಳಿಂದ ಪದೇ ಪದೇ ಆರೋಗ್ಯ ಸಮಸ್ಯೆಗಳನ್ನು ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾನಿ ಅವರು ಎದುರಿಸುತ್ತಿದ್ದಾರೆ. ಇದು ಜುಲೈ ನಂತರ ಅವರ ನಾಲ್ಕನೇ ಬಾರಿಗೆ ಆಸ್ಪತ್ರೆಗೆ ದಾಖಲಾಗಿದೆ. ಅವರು ಈ ಹಿಂದೆ ಅಪೋಲೋ ಆಸ್ಪತ್ರೆ ಮತ್ತು ದೆಹಲಿಯ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (AIIMS) ಎರಡರಲ್ಲೂ ಚಿಕಿತ್ಸೆ ಪಡೆದಿದ್ದರು. ಇದೀಗ ಮತ್ತೆ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ ಕೆ ಅಡ್ವಾನಿ ಅವರು ಆಸ್ಪತ್ರೆಗೆ ದಾಖಲಾದ ಹಿನ್ನಲೆ ಬಿಜೆಪಿ ವಕ್ತಾರ ಕೆ ಕೃಷ್ಣ ಸಾಗರ್ ರಾವ್ ಅವರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ, ಅಡ್ವಾಣಿ ಅವರನ್ನು “ನಮ್ಮ ಎತ್ತರದ ನಾಯಕ” ಎಂದು ಕರೆದಿದ್ದಾರೆ. ಎಲ್.ಕೆ. ಅಡ್ವಾಣಿ ಅವರು ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಅವರು ಉತ್ತಮ, ಆರೋಗ್ಯಕರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಎಕ್ಸ್ನಲ್ಲಿ ಬರೆದುಕೊಂಡಿದ್ದಾರೆ.