ಗಣಿ ಅಕ್ರಮ ಪ್ರಕರಣಗಳಿಂದ ಸರ್ಕಾರಕ್ಕಾಗಿರುವ ನಷ್ಟ ವಸೂಲಿಗೆ ಹೊಸ ಕಾಯ್ದೆ: ಡಾ. ಜಿ ಪರಮೇಶ್ವರ್. | New Act Against Illegal Mining Cases

ಗಣಿ ಅಕ್ರಮ ಪ್ರಕರಣಗಳಿಂದ ಸರ್ಕಾರಕ್ಕಾಗಿರುವ ನಷ್ಟ ವಸೂಲಿಗೆ ಹೊಸ ಕಾಯ್ದೆ: ಡಾ. ಜಿ ಪರಮೇಶ್ವರ್. | New Act Against Illegal Mining Cases

ವಿಧಾನಸಭೆ : ಗಣಿ ಅಕ್ರಮ ಪ್ರಕರಣಗಳಿಂದ ಸರ್ಕಾರಕ್ಕಾಗಿರುವ ನಷ್ಟ ವಸೂಲಿ ಮಾಡಲು ವಸೂಲಿ ಆಯುಕ್ತರನ್ನು ನೇಮಿಸಲು ಮುಂದಾಗಿರುವ ಸರ್ಕಾರ, ಅದಕ್ಕಾಗಿ ಹೊಸ ಕಾಯ್ದೆ ಜಾರಿಗೊಳಿಸಲು ಸಜ್ಜಾಗಿದೆ. ನೂತನ ಕರ್ನಾಟಕ ಅಕ್ರಮ ಗಣಿಗಾರಿಕೆ ಮತ್ತು ಅಪರಾಧದ ಉತ್ಪತ್ತಿಗಳಿಂದಾದ ಸ್ವತ್ತನ್ನು ವಶಪಡಿಸಿಕೊಳ್ಳುವುದಕ್ಕಾಗಿ ಮತ್ತು ಜಪ್ತಿಗಾಗಿ ವಸೂಲಾತಿ ಆಯುಕ್ತರ ನೇಮಕಾತಿ ವಿಧೇಯಕ 2025ಅನ್ನು ಗೃಹ ಸಚಿವ ಡಾ। ಜಿ.ಪರಮೇಶ್ವರ್ ಮಂಡಿಸಿದರು. ರಾಜ್ಯದಲ್ಲಿ ಲೆಕ್ಕವಿಲ್ಲದಷ್ಟು ಗುತ್ತಿಗೆದಾರರು, ಸಾಗಣಿಕೆದಾರರು, ರಫ್ತುದಾರರು, ದಾಸ್ತಾನು ಧಾರಕರು, ಖರೀದಿದಾರರು ಮತ್ತು ಮಧ್ಯವರ್ತಿಗಳು ಸೇರಿದಂತೆ ಬಹು ವಹಿವಾಟುಗಳಿಂದ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ನಡೆದಿವೆ. ಅದು ವ್ಯವಸ್ಥಿತ ಒಳಸಂಚು ಹೊಂದಿರುವ ಸಂಘಟಿತ ಅಪರಾಧ. ಇದರಿಂದ ಸರ್ಕಾರಕ್ಕಾಗಿರುವ ನಷ್ಟವನ್ನು ವಸೂಲಿಗೆ ವಿಧೇಯಕ ಜಾರಿಗೊಳಿಸಲಾಗುತ್ತಿದೆ.

ಇದಕ್ಕಾಗಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ದರ್ಜೆಗಿಂತ ಕಡಿಮೆಯಿಲ್ಲದ, ಸೇವೆಯಲ್ಲಿರುವ ಅಥವಾ ನಿವೃತ್ತ ಅಧಿಕಾರಿಯನ್ನು ವಸೂಲಾತಿ ಆಯುಕ್ತರನ್ನಾಗಿ ನೇಮಕ ಮಾಡಲು ಅವಕಾಶ ಕಲ್ಪಿಸಿಕೊಳ್ಳಲಾಗಿದೆ. ನೇಮಕವಾಗುವ ವಸೂಲಾತಿ ಆಯುಕ್ತರು ಅಕ್ರಮ ಗಣಿಗಾರಿಕೆಯಲ್ಲಿ ಪಾಲ್ಗೊಂಡವರ ಚರ ಮತ್ತು ಸ್ಥಿರಾಸ್ತಿಗಳ ಜಪ್ತಿ ಅಥವಾ ಮುಟ್ಟುಗೋಲು ಮತ್ತು ವಸಲಾತಿ ಕಾರ್ಯಾಚರಣೆಗಳ ಮೇಲೆ ಒಟ್ಟಾರೆ ಮೇಲ್ವಿಚಾರಣಾ ಅಧಿಕಾರವನ್ನು ಹೊಂದಿರುತ್ತಾರೆ. ಅದರ ಜತೆಗೆ ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಬರುವ ದೂರುಗಳನ್ನು, ದಾಖಲೆ, ವರದಿಯನ್ನು ಪರಿಶೀಲಿಸಬೇಕು. ಅಲ್ಲದೆ, ಸ್ವತ್ತುಗಳ ಜಪ್ತಿಗೆ ಹೊರಡಿಸುವ ಎಲ್ಲ ಮುಟ್ಟುಗೋಲು ಆದೇಶಗಳನ್ನು ರಾಜ್ಯ ಸರ್ಕಾರದಿಂದ ದೃಢೀಕರಿಸಿಕೊಳ್ಳಬೇಕು. ಅದರ ಜತೆಗೆ ಜಪ್ತಿ ಅಥವಾ ಮುಟ್ಟುಗೋಲಿಗೂ ಮುನ್ನ ಕಾನೂನು ಪ್ರಕಾರ ಸೂಚನೆಗಳನ್ನು ಪಾಲಿಸಬೇಕು ಎಂದು ವಿಧೇಯಕದಲ್ಲಿ ತಿಳಿಸಲಾಗುತ್ತಿದೆ.

ಕುರಿಗಾಹಿಗಳ ವಿರುದ್ಧದ ದೌರ್ಜನ್ಯ ತಡೆಗೆ ಕಾಯ್ದೆ: ರಾಜ್ಯದ ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ ಹಿತರಕ್ಷಣೆಗಾಗಿ, ಅವರಿಗೆ ಭದ್ರತೆ ಒದಗಿಸುವ ಉದ್ದೇಶದೊಂದಿಗೆ ಕರ್ನಾಟಕ ಸಾಂಪ್ರದಾಯಿಕ ವಲಸೆ ಕುರಿಗಾಹಿಗಳ (ಕಲ್ಯಾಣ ಕ್ರಮಗಳು ಮತ್ತು ದೌರ್ಜನ್ಯಗಳ ವಿರುದ್ಧ ರಕ್ಷಣೆ) ವಿಧೇಯಕ 2025ನ್ನು ಪಶುಸಂಗೊಪನಾ ಸಚಿವ ಕೆ. ವೆಂಕಟೇಶ್ ಮಂಡಿಸಿದರು. ವಿಧೆಯಕದ ಅಡಿಯಲ್ಲಿ ಅಲೆಮಾರಿ ಕುರಿಗಾಹಿಗಳ ಪತ್ತೆ ಮತ್ತು ಅವರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸುವ ಸಲುವಾಗಿ ಫಲಾನೂಭವಿಯಾಗಿ ನೊಂದಾಯಿಸಿಕೊಳ್ಳಬೇಕು. ಹೀಗೆ ನೋಂದಣಿ ಮಾಡಿಕೊಂಡವರು ಸರ್ಕಾರದಿಂದ ಗುರುತಿನ ಚೀಟಿ ನೀಡಲಾಗುವುದು. ಅದರ ಮೂಲಕ ವಸತಿ ಸೌಲಭ್ಯ, ವಿಮೆ, ಆರೋಗ್ಯ ಸೇವೆ ಸೇರಿದಂತೆ ಹಲವು ಸೇವೆಗಳನ್ನು ಪಡೆಯಲು ಅರ್ಹರಾಗಲಿದ್ದಾರೆ. ಅಲ್ಲದೆ, ಕ್ಷೇಮಾಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕಾಗಿ ಅಲೆಮಾರಿ ಕುರಿಗಾಹಿಗಳ ಕ್ಷೇಮಾಭಿವೃದ್ಧಿ ನಿಧಿ ಮತ್ತು ಮಂಡಳಿಯನ್ನು ರಚಿಸಲಾಗುತ್ತದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *