SSLC ಫಲಿತಾಂಶ ಸುಧಾರಣೆಗಾಗಿ ಹೊಸ ಪ್ಲಾನ್.

SSLC ಫಲಿತಾಂಶ ಸುಧಾರಣೆಗಾಗಿ ಹೊಸ ಪ್ಲಾನ್.

ಮಾರ್ಚ್ 18–ಏಪ್ರಿಲ್ 2: ವಿದ್ಯಾರ್ಥಿಗಳಿಗೆ “ಟಿವಿ–ಮೊಬೈಲ್ ಸ್ವಿಚ್ ಆಫ್” ಸಲಹೆ.

ಬೆಂಗಳೂರು : ಎಸ್ಎಸ್ಎಲ್ಸಿ ವಾರ್ಷಿಕ ಪರೀಕ್ಷೆಗಳು ಸಮೀಪಿಸುತ್ತಿದ್ದಂತೆ, ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು ಮಹತ್ವದ ಉಪಕ್ರಮ ಕೈಗೊಂಡಿದೆ. ಇದಕ್ಕಾಗಿ ಮನೆಗೆ ತೆರಳಿ ಅಭಿಯಾನವನ್ನು ಪ್ರಾರಂಭಿಸಲಾಗಿದೆ. ಈ ಅಭಿಯಾನದಡಿ, ಶಿಕ್ಷಕರು ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ ಪೋಷಕರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ.

ಮುಂಬರುವ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ನಡೆಯಲಿರುವ ಪರೀಕ್ಷೆಗಳಿಗೆ ವಿದ್ಯಾರ್ಥಿಗಳು ಉತ್ತಮವಾಗಿ ಸಿದ್ಧರಾಗಲು, ಪ್ರತಿ ಮನೆಯಲ್ಲಿ ಪ್ರತಿದಿನ ಸಂಜೆ 7 ರಿಂದ 9 ರವರೆಗೆ ಮೊಬೈಲ್ ಮತ್ತು ಟಿವಿಗಳನ್ನು ಸಂಪೂರ್ಣವಾಗಿ ಸ್ವಿಚ್ ಆಫ್ ಮಾಡುವಂತೆ ಶಿಕ್ಷಣ ಇಲಾಖೆಯು ಸುತ್ತೋಲೆ ಹೊರಡಿಸಿದೆ. ಈ ಅವಧಿಯಲ್ಲಿ ಮಕ್ಕಳು ಅಧ್ಯಯನಕ್ಕೆ ಹೆಚ್ಚಿನ ಗಮನ ನೀಡಲು ಪ್ರೇರೇಪಿಸುವುದು ಇದರ ಹಿಂದಿನ ಉದ್ದೇಶವಾಗಿದೆ. ವಿದ್ಯಾರ್ಥಿ ಜೀವನದ ಪ್ರಮುಖ ಘಟ್ಟವಾದ ಎಸ್ಎಸ್ಎಲ್ಸಿಯಲ್ಲಿ ಉತ್ತಮ ಅಂಕ ಗಳಿಸಲು ಇದು ಸಹಾಯಕವಾಗಲಿದೆ ಎಂದು ಇಲಾಖೆ ತಿಳಿಸಿದೆ. ಸರ್ಕಾರದ ಈ ಆದೇಶವನ್ನು ಕೆಲವು ವಿದ್ಯಾರ್ಥಿಗಳು ಸ್ವಾಗತಿಸಿದ್ದು, ಇದು ಓದಿಗೆ ಸಹಾಯಕವಾಗಲಿದೆ ಎಂದಿದ್ದಾರೆ. ಆದರೆ, ಪೋಷಕರು ಈ ನಿಯಮವನ್ನು ಎಷ್ಟು ಪಾಲಿಸುತ್ತಾರೆ ಎಂಬುದು ಯಕ್ಷಪ್ರಶ್ನೆಯಾಗಿದೆ.

For More Updates Join our WhatsApp Group :

https://chat.whatsapp.com/JVoHqE476Wn3pVh1gWNAcH

Leave a Reply

Your email address will not be published. Required fields are marked *