ರಾಷ್ಟ್ರಪತಿ ಭಾಷಣದಲ್ಲಿ ಅಲ್ಪಸಂಖ್ಯಾತರ ಪ್ರಸ್ತಾಪವಿಲ್ಲ, ನಿರಾಶಾದಾಯಕ: ಸದನದಲ್ಲಿ ಖರ್ಗೆ ಗರಂ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರ ಭಾಷಣದ ಬಗ್ಗೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋಮವಾರ ನಿರಾಶೆ ವ್ಯಕ್ತಪಡಿಸಿದ್ದು, ಸಮಾಜದ ದುರ್ಬಲ ವರ್ಗದವರಿಗೆ ಸೌಲಭ್ಯಗಳ ಕೊರತೆಯಂತಹ ಮೂಲಭೂತ ಸಮಸ್ಯೆಗಳನ್ನು ನಿರ್ಲಕ್ಷಿಸಿ ಬರೀ ಸರ್ಕಾರ ಹೊಗಳವುದರಲ್ಲಿಯೇ ತುಂಬಿದೆ ಎಂದಿದ್ದಾರೆ.

ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯಕ್ಕೆ ಉತ್ತರಿಸಿದ ಖರ್ಗೆ, ರಾಷ್ಟ್ರಪತಿ ಭಾಷಣವನ್ನು ಸರ್ಕಾರ ರಚಿಸಿದೆ. ಸದನದಲ್ಲಿ ‘ಜೈ ಸಂವಿಧಾನ ‘ಘೋಷಣೆಯೊಂದಿಗೆ ಸಮಸ್ಯೆಗಳನ್ನು ಎದುರಿಸುತ್ತಿರುವ ಸಂಸದರು ಮತ್ತು ಪಕ್ಷಗಳಿವೆ.

ರಾಷ್ಟ್ರಪತಿಗಳ ಜಂಟಿ ಭಾಷಣದಲ್ಲಿ ಯಾವುದೇ ದೂರದೃಷ್ಟಿ ಮತ್ತು ನಿರ್ದೇಶನ ಇಲ್ಲ. ಬಡವರು, ದಲಿತರು ಮತ್ತು ಅಲ್ಪಸಂಖ್ಯಾತರ ಪ್ರಸ್ತಾಪವಿಲ್ಲ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸಿ ಟೀಕಾ ಪ್ರಹಾರ ನಡೆಸಿದ ಖರ್ಗೆ, ವಿಪಕ್ಷಗಳು ಸಾಮಾನ್ಯ ಜನರ ಸಂಕಷ್ಟದ ಬಗ್ಗೆ ಮಾತನಾಡುತ್ತವೆ. ಆದರೆ ಮೋದಿ ಅವರು ಕೇವಲ ‘ಮನ್ ಕಿ ಬಾತ್’ ಮಾಡುತ್ತಾರೆ. ಕಳೆದ ಒಂದು ವರ್ಷದಿಂದ ಹೊತ್ತಿ ಉರಿಯುತ್ತಿರುವ ಮಣಿಪುರಕ್ಕೆ ಪ್ರಧಾನಿ ಭೇಟಿ ನೀಡಿಲ್ಲ. ಅವರು ಕೇವಲ ಘೋಷಣೆಗಳನ್ನು ನೀಡುವುದರಲ್ಲಿ ನಿಪುಣರು ಎಂದರು

Leave a Reply

Your email address will not be published. Required fields are marked *