NEET-UG ಮರುಪರೀಕ್ಷೆ ಇಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಲೈಂಗಿಕ ದೌರ್ಜನ್ಯ ಸಂತ್ರಸ್ತರಿಗೆ ಕಡ್ಡಾಯವಾಗಿ ಪರಿಹಾರ ನೀಡಬೇಕು - ಸುಪ್ರೀಕೋರ್ಟ್

ನವದೆಹಲಿ: ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ(NEET-UG) ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪಗಳ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸಲು ಸುಪ್ರೀಂ ಕೋರ್ಟ್ ಮಂಗಳವಾರ ನಿರಾಕರಿಸಿದೆ.

NEET-UG ಮರುಪರೀಕ್ಷೆ ನಡೆಸುವಂತೆ ಕೋರಿ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಸುಪ್ರೀಂ ಪೀಠ, ಪರೀಕ್ಷೆ ನಡೆಸುವಲ್ಲಿ ವ್ಯವಸ್ಥಿತ ದೋಷಗಳಿವೆ. ಇದರಿಂದ 155 ಅಭ್ಯರ್ಥಿಗಳು ಪ್ರಯೋಜನ ಪಡೆದಿದ್ದಾರೆ ಎಂದು ಹೇಳಿದೆ.

ನೀಟ್ ಪರೀಕ್ಷೆಯನ್ನು ಮತ್ತೆ ನಡೆಸುವುದೇ ಸರಿಯಾದ ಪರಿಹಾರ ಅಲ್ಲ. ಹಾಗೆ ಮಾಡಿದರೆ 24 ಲಕ್ಷ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಾರೆ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಅವರು ಹೇಳಿದರು. ಮರು ಪರೀಕ್ಷೆ ನಡೆಸದಿದ್ದರೆ ನೀಟ್‌ನ ಪಾವಿತ್ರ್ಯತೆಗೆ ಧಕ್ಕೆಯಾಗುತ್ತದೆ ಎಂಬ ಅಭಿಪ್ರಾಯವನ್ನು ಸುಪ್ರೀಂ ಕೋರ್ಟ್ ಒಪ್ಪಲಿಲ್ಲ. ಈ ತೀರ್ಪಿನ ಆಕ್ಷೇಪಣೆಗಳನ್ನು ಆಗಸ್ಟ್ 21 ರಂದು ಆಲಿಸಲಾಗುವುದು ಎಂದು ಅವರು ತಿಳಿಸಿದರು.

ನೀಟ್ ಪರೀಕ್ಷೆಯನ್ನು ಮತ್ತೆ ನಡೆಸುವುದರಿಂದ ಅಡ್ಮಿಷನ್, ವೈದ್ಯಕೀಯ ಶಿಕ್ಷಣದ ಕೋರ್ಸ್‌ನ ಮೇಲೆ ಪರಿಣಾಮ ಬೀರುತ್ತದೆ. ಭವಿಷ್ಯದಲ್ಲಿ ಅರ್ಹ ವೈದ್ಯಕೀಯ ವೃತ್ತಿಪರರ ಲಭ್ಯತೆಯ ಮೇಲೆ ಪರಿಣಾಮ ಬೀರುತ್ತದೆ ಮತ್ತು ಸೀಟುಗಳ ಹಂಚಿಕೆಯಲ್ಲಿ ಗಂಭೀರವಾಗಿ ಅನನುಕೂಲಕವಾಗಲಿದೆ” ಎಂದು ನ್ಯಾಯಾಲಯ ಹೇಳಿದೆ.

Leave a Reply

Your email address will not be published. Required fields are marked *