ಬೆಂಗಳೂರೂ : ರಾಜಧಾನಿ ಬೆಂಗಳೂರಿನಲ್ಲಿ ನಿರಂತರವಾದ ಮಳೆ ಸುರಿಯುತ್ತಿರುವದರಿಂದ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದ್ದು, ವಾಹನ ಸವಾರರು ಕೂಡ ಪರದಾಟ ನಡೆಸುತ್ತಿದ್ದಾರೆ. ಇದರ ಮಧ್ಯ ಶಾಲಾ ಮತ್ತು ಕಾಲೇಜುಗಳಿಗೆ ತೆರಳಲು ವಿದ್ಯಾರ್ಥಿಗಳು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ.
ಹೌದು ಬೆಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ನಿರಂತರವಾಗಿ ಮಳೆ ಸುರಿಯುತ್ತಿರುವುದರಿಂದ ವಿದ್ಯಾರ್ಥಿಗಳು ಶಾಲಾ ಮತ್ತು ಕಾಲೇಜಿಗೆ ಹೋಗಲು ಪರದಾಡುತ್ತಿದ್ದಾರೆ.ಅಲ್ಲದೆ ಹಲವಡೆ ರಸ್ತೆ ಸಂಪೂರ್ಣವಾಗಿ ಜಲಾವೃತವಾಗಿದ್ದು, ರಸ್ತೆಗಳು ಕೆರೆಗಳಂತೆ ನೀರು ತುಂಬಿಕೊಂಡಿವೆ . ಹಾಗಾಗಿ ಜಿಲ್ಲಾಧಿಕಾರಿ ಜಗದೀಶ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಈಗಾಗಲೇ ಸರ್ಕಾರಿ ಶಾಲೆಗಳಿಗೆ ದಸರಾ ಹಬ್ಬದ ಅಂಗವಾಗಿ ಅಕ್ಟೋಬರ್ 20ರವರೆಗೆ ರಜೆ ಇದೆ.
ಆದರೆ ಖಾಸಗಿ ಶಾಲೆಯ ವಿದ್ಯಾರ್ಥಿಗಳಿಗೆ ಶಾಲೆ ಮತ್ತು ಕಾಲೇಜುಗಳಿಗೆ ತೆರಳಲು ಸಮಸ್ಯೆ ಉಂಟಾಗಿದ್ದರಿಂದ ಜಿಲ್ಲಾಧಿಕಾರಿ ಜಗದೀಶ್ ಅವರು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೆ ಇನ್ನೂ ನಾಳೆ ಮತ್ತು ನಾಡಿದ್ದು ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮನ್ಸೂಚನೆ ನೀಡಿದೆ. ಹಿನ್ನೆಲೆಯಲ್ಲಿ ನಾಳೆ ಮತ್ತು ನಾಡಿದ್ದ ಕೂಡ ಶಾಲಾ, ಕಾಲೇಜುಗಳಿಗೆ ರಜೆ ನೀಡುವ ಕುರಿತು ಜಿಲ್ಲಾಧಿಕಾರಿ ಇಂದು ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.